ಹೊಸನಗರದಲ್ಲಿ ಮಳೆ ಜೋರು, ಯಡೂರು, ಹುಲಿಕಲ್ನಲ್ಲಿ ಅಬ್ಬರಿಸಿದ ವರುಣ

ಶಿವಮೊಗ್ಗ ಲೈವ್.ಕಾಂ | HOSANGARA NEWS | 13 JUNE 2021 ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆಯಾಗಿದೆ. ಎಡೆಬಿಡದೆ ಸುರಿದ ಮಳೆಯಿಂದಾಗಿ ಜನರು ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿತ್ತು. ಈ ನಡುವೆ ತಾಲೂಕಿನಲ್ಲಿ ಕೃಷಿ ಚಟುವಟಿಕೆ ಬಿರುಸು ಪಡೆದುಕೊಂಡಿದೆ.

ಕಳೆದ 24 ಗಂಟೆ ಅವಧಿಯಲ್ಲಿ ತಾಲೂಕಿನ ಯಡೂರಿನಲ್ಲಿ 135 ಮಿ.ಮೀ ಮಳೆಯಾಗಿದೆ. ಮಾಣಿ, ಹುಲಿಕಲ್‍ನಲ್ಲಿ 123 ಮಿ.ಮೀ, ಹೊಸನಗರದಲ್ಲಿ  119 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 106 ಮಿ.ಮೀ, ಚಕ್ರಾದಲ್ಲಿ 100 ಮಿ.ಮೀ, ಸಾವೇಹಕ್ಲುವಿನಲ್ಲಿ 96 ಮಿ.ಮೀ ಮಳೆಯಾಗಿದೆ.

ಗರಿಗೆದರಿದ ಕೃಷಿ ಚಟುವಟಿಕೆ

ಮಳೆಯಾಗುತ್ತಿದ್ದಂತೆ ತಾಲೂಕಿನಲ್ಲಿ ಕೃಷಿ ಚಟುವಟಿಕೆ ಗರಿಗೆದರಿದೆ. ತಾಲೂಕಿನಲ್ಲಿ  ಭತ್ತ ನಾಟಿ ಪ್ರಕ್ರಿಯೆ ಶುರುವಾಗಿದೆ. ಮುಸುಕಿನ ಜೋಳ ಬಿತ್ತನೆ ಕಾರ್ಯ ಆರಂಭವಾಗಿದ್ದು, 50 ಹೆಕ್ಟೇರ್‍ನಲ್ಲಿ ಈಗಾಗಲೇ ಬಿತ್ತನೆಯಾಗಿದೆ. 200 ಹೆಕ್ಟೇರ್‍ ಪ್ರದೇಶದಲ್ಲಿ ವಾಣಿಜ್ಯ ಬೆಳೆಗಳ ಬಿತ್ತನೆ ಕಾರ್ಯವಾಗಿದೆ ಎಂದು ಕೃಷಿ ಇಲಾಖೆ ಮಾಹಿತಿ ನೀಡಿದೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment