ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 14 ಜೂನ್ 2021
ಮಕ್ಕಳ ಅಶ್ಲೀಲ ವಿಡಿಯೋ ಅಪ್‍ಲೋಡ್ ಮಾಡಿದ ಆರೋಪದ ಮೇಲೆ ಸಾಗರದ ಯುವಕನೊಬ್ಬನ ವಿರುದ್ಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರ ಎಸ್‍ಪಿಎಂ ರಸ್ತೆಯ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಸಿಐಡಿ ಘಟಕದ ಸೈಬರ್ ಟಿಪ್ ಲೈನ್ ಮಾಹಿತಿ ಆಧಾರದ ಮೇಲೆ ಯುವಕನ ವಿರುದ್ಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಲಾಗಿದೆ.
ಯುವಕ ತನ್ನ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ್ದ ಎಂದು ಆರೋಪಿಸಲಾಗಿದೆ. ಸೈಬರ್ ಟಿಪ್ ಲೈನ್ ಅವರು ಐಪಿ ವಿಳಾಸ ಮತ್ತು ಇತರೆ ಮಾಹಿತಿಯನ್ನು ಶಿವಮೊಗ್ಗದ ಸಿಇಎನ್ ಠಾಣೆ ಪೊಲೀಸರಿಗೆ ವರ್ಗಾಯಿಸಿದ್ದರು. ಇದರ ಆಧಾರದ ಮೇಲೆ ಯುವಕನ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.