ಶಿವಮೊಗ್ಗ ಲೈವ್.ಕಾಂ | TYAGARTHI NEWS | 14 JUNE 2021
ಸಾಮಾಜಿಕ ಅಂತರ ಕಾಪಾಡದೆ, ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸದೆ ಲಸಿಕೆ ನೀಡುತ್ತಿದ್ದ ಅಧಿಕಾರಿಗಳಿಗೆ ಸಾಗರ ತಾಲೂಕು ಆರೋಗ್ಯಾಧಿಕಾರಿ ಕ್ಲಾಸ್ ತೆಗೆದುಕೊಂಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತ್ಯಾಗರ್ತಿಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಸಾರ್ವಜನಿಕರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಆದರೂ ಲಸಿಕಾ ಕೇಂದ್ರದಲ್ಲಿ ಜನದಟ್ಟಣೆ ಇತ್ತು. ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಡಾ. ಕೆ.ಎಸ್.ಮೋಹನ್, ಜನರು ಗುಂಪುಗೂಡಿದ್ದನ್ನು ಕಂಡು ಸಿಟ್ಟಾದರು.
ಲಸಿಕೆಗಾಗಿ ನಿಂತಿದ್ದವರು ಸಾಮಾಜಿಕ ಅಂತರ ಕಾಪಾಡಿರಲಿಲ್ಲ. ಕೆಲವರು ಮಾಸ್ಕ್ ಧರಿಸಿರಲಿಲ್ಲ. ಇದನ್ನು ಕಂಡು ಟಿಹೆಚ್ಒ ಡಾ. ಮೋಹನ್ ಆರೋಗ್ಯ ಕೇಂದ್ರದ ಅಧಿಕಾರಿಗಳನ್ನು ತರಾಟಗೆ ತೆಗೆದುಕೊಂಡರು. ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಲಸಿಕೆ ನೀಡಬೇಕು ಎಂದು ಸೂಚಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ರೀದೇವಿ ಸೇರಿದಂತೆ ಹಲವರು ಈ ವೇಳೆ ಇದ್ದರು.
ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]