ಶಿವಮೊಗ್ಗ ನಗರದಲ್ಲಿ ಬಿಡುವು ಕೊಟ್ಟು ಅಬ್ಬರಿಸಿದ ವರುಣ, ಕಳೆದ 24 ಗಂಟೆಯಲ್ಲಿ ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ?

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 JUNE 2021 ➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ನಗರದಲ್ಲಿ ಮುಂಗಾರು ಚುರುಕು ಪಡೆದುಕೊಂಡಿದೆ. ಬೆಳಗ್ಗೆ ಸ್ವಲ್ಪ ಬಿಡುವು ನೀಡಿದ್ದ ವರುಣ ಮತ್ತೆ ಅಬ್ಬರ ಶುರು ಮಾಡಿದ್ದಾನೆ.

ಬೆಳಗ್ಗೆ ಕೆಲ ಹೊತ್ತು ಮಳೆಯಾಗಿತ್ತು. ಬಳಿಕ ಸ್ವಲ್ಪ ಹೊತ್ತು ಬಿಡುವು ನೀಡಿತ್ತು. ಅಲ್ಲದೆ ಬಿಸಿಲು ಕಾಣಿಸಿಕೊಂಡಿತ್ತು. ಆ ಬಳಿಕ ಮತ್ತೆ ಮಳೆ ಅಬ್ಬರ ಶುರುವಾಗಿದೆ.

ಇನ್ನು ಜಿಲ್ಲೆಯ ವಿವಿಧೆಡೆಯು ಇವತ್ತು ಮಳೆ ಬಿರುಸು ಪಡೆದಿದೆ. ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 16.40 ಮಿ.ಮೀ, ಭದ್ರಾವತಿ 9.20 ಮಿ.ಮೀ, ತೀರ್ಥಹಳ್ಳಿ  77.20 ಮಿ.ಮೀ, ಸಾಗರ 56.60 ಮಿ.ಮೀ, ಶಿಕಾರಿಪುರ 15.20 ಮಿ.ಮೀ, ಸೊರಬ 48.20 ಮಿ.ಮೀ, ಹೊಸನಗರ 320.80 ಮಿ.ಮೀ ಮಳೆಯಾಗಿದೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಕೊಡಚಾದ್ರಿ ಟ್ರೆಕ್ಕಿಂಗ್‌: ಹೃದಯಾಘಾತದಿಂದ ಸಿನಿಮಾ ನಿರ್ಮಾಪಕನ ಪುತ್ರ ಸಾವು