ಒಳ ಹರಿವು ಕಡಿಮೆಯಾದರೂ ತುಂಗಾ ಡ್ಯಾಂನ ಹೊರ ಹರಿವು ಹೆಚ್ಚಳ, ಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಇವತ್ತೆಷ್ಟಿದೆ?

ಶಿವಮೊಗ್ಗ ಲೈವ್.ಕಾಂ | SHIMOGA / BHADRAVATHI NEWS | 19 JUNE 2021 ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಜಲಾಶಯಗಳ ಒಳ ಹರಿವು ಪ್ರಮಾಣವು ಸ್ವಲ್ಪ ತಗ್ಗಿದೆ. ಆದರೆ ತುಂಗಾ ಜಲಾಶಯದ ಹೊರಹರಿವು ಮಾತ್ರ ಕಡಿಮೆಯಾಗಿಲ್ಲ.

ತುಂಗಾ ಜಲಾಶಯದ ಒಳಹರಿವು ಕಡಿಮೆಯಾಗಿದೆ. 27,040 ಕ್ಯೂಸೆಕ್‍ ಒಳ ಹರಿವು  ಇದೆ. ಆದರೆ ಮಳೆ ಹೆಚ್ಚಳವಾಗುವ ಸಂಭವ ಇರುವುದರಿಂದ 33,104 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಈ ಪೈಕಿ 33,069 ಕ್ಯೂಸೆಕ್‍ ನೀರನ್ನು ನೇರವಾಗಿ ನದಿಗೆ ಬಿಡಲಾಗುತ್ತಿದೆ.

ಭದ್ರಾ ಜಲಾಶಯಕ್ಕೂ ಉತ್ತಮ ಒಳಹರಿವು ಇದೆ. 17,885 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಇದರಿಂದ ಜಲಾಶಯದಲ್ಲಿ ನೀರಿನ ಮಟ್ಟ 148.6 ಅಡಿಗೆ ಏರಿಕೆಯಾಗಿದೆ. ಸದ್ಯ 24.612 ಟಿಎಂಸಿ ನೀರು ಸಂಗ್ರಹವಾಗಿದೆ.

Nammur News For Website 2 1 1 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment