ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA NEWS | 19 JUNE 2021
ಸಾಗರ ತಾಲೂಕಿನ ದೇವಸ್ಥಾನಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಬೇಕು ಎಂದು ವಿಪ್ರ ವೈದಿಕ ಪರಿಷತ್ ಮತ್ತು ತ್ರಿಮತಸ್ಥ ಬ್ರಾಹ್ಮಣ ಅರ್ಚಕರು, ಪುರೋಹಿತರ ಪರಿಷತ್ ವತಿಯಿಂದ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಿದ ಪರಿಷತ್ ಸದಸ್ಯರು, 45 ದಿನದಿಂದ ದೇವಸ್ಥಾನಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಈಗ ರಾಜ್ಯದಲ್ಲಿ ಕರೋನ ಸೋಂಕು ಇಳಿಮುಖವಾಗಿದೆ. ದೇವಸ್ಥಾನ ಬಾಗಿಲು ತೆಗೆಯಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಮದ್ಯದ ಅಂಗಡಿ ತೆಗೆಯಲಷ್ಟೆ ಅವಕಾಶವಾ?
ಇದೆ ವೇಳೆ ಮಾತನಾಡಿದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಪ್ರಧಾನ ವಕ್ತಾರ ಮ.ಸ.ನಂಜುಂಡಸ್ವಾಮಿ, ರಾಜ್ಯದಲ್ಲಿ ಬೆಳಗ್ಗೆ 6 ಗಂಟೆಗೆ ಮದ್ಯದಂಗಡಿಗಳ ಬಾಗಿಲು ತೆಗೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ ಮನಃ ಶಾಂತಿ ನೀಡಿ, ಜನರಲ್ಲಿ ಸ್ಥೈರ್ಯ ತುಂಬುವ ದೇವಸ್ಥಾನಗಳ ಬಾಗಿಲು ತೆಗೆಯಲು ಅವಕಾಶ ನೀಡಿಲ್ಲ. ಇನ್ನಾದರೂ ಸರ್ಕಾರ ಇತ್ತ ಗಮನ ವಹಿಸಬೇಕು ಎಂದು ಆಗ್ರಹಿಸಿದರು.
ಪ್ರಮುಖರಾದ ನವೀನ್ ಜೋಯ್ಸ್, ರಾಘವೇಂದ್ರ ಭಟ್, ಅನಿಲ್ ಹೊಳ್ಳ, ಗಿರೀಶ್ ಭಟ್, ಪ್ರಶಾಂತ್ ಭಟ್, ಗಜಾನನ ಜೋಯ್ಸ್, ಮಿಥುನ್, ವಿನಯ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]