ರಾಗಿಗುಡ್ಡದಲ್ಲಿ ನಡುರಾತ್ರಿ ಕಬ್ಬಿಣದ ರಾಡ್ ಹಿಡಿದು ಓಡಾಡುತ್ತಿದ್ದ ಇಬ್ಬರ ವಿರುದ್ಧ ಕೇಸ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 JUNE 2021

ನಡುರಾತ್ರಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರ ವಿಚಾರಣೆ ನಡೆಸಿದ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಯುವಕನೊಬ್ಬನ ಕೈಯಲ್ಲಿ ಕಬ್ಬಿಣದ ರಾಡ್ ಇರುವುದು ಅನುಮಾನಕ್ಕೆ ಕಾರಣವಾಗಿತ್ತು.

ಶಿವಮೊಗ್ಗದ ರಾಗಿಗುಡ್ಡದ ಚರ್ಚ್ ಬಳಿ ಇಬ್ಬರು ಯುವಕರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಪೊಲೀಸರನ್ನು ಕಂಡು ಯುವಕರು ಪರಾರಿಯಾಗಲು ಯತ್ನಿಸಿದ್ದಾರೆ. ಅವರನ್ನು ತಡೆದು ವಿಚಾರಣೆ ನಡೆಸಿದ್ದಾರೆ.

ಒಬ್ಬ ಯುವಕನ ಕೈಯಲ್ಲಿ ಕಬ್ಬಿಣದ ರಾಡ್ ಇತ್ತು. ಅಲ್ಲದೆ ನಡುರಾತ್ರಿಯಲ್ಲಿ ಓಡಾಡಲು ಸ್ಪಷ್ಟ ಕಾರಣ ತಿಳಿಸದ ಹಿನ್ನೆಲೆ, ಇಬ್ಬರನ್ನು ವಶಕ್ಕೆ ಪಡೆಯಲಾಯಿತು. ಬಂಧಿತರನ್ನು ಶಿವಶಂಕರ್ ಮತ್ತು ಸಂದೀಪ್ ಕುಮಾರ್ ಎಂದು ಗುರುತಿಸಲಾಗಿದೆ.

ಗ್ರಾಮಾಂತರ ಠಾಣೆ ಪಿಎಸ್ಐ ಮಂಜುನಾಥ್, ಸಿಬ್ಬಂದಿಗಳಾದ ಯಶವಂತ, ಜಗದೀಶ್ ಅವರು ರಾತ್ರಿ ಗಸ್ತಿನಲ್ಲಿದ್ದಾಗ ಘಟನೆ ನಡೆದಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

prison hand cuff image

Leave a Comment