ಶಿವಮೊಗ್ಗ ಲೈವ್.ಕಾಂ | SHIMOGA NEWS | 26 JUNE 2021
ಕಷ್ಟದಲ್ಲಿರುವ ಜನರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತಷ್ಟು ಸಂಕಷ್ಟ ಸೃಷ್ಟಿಸುತ್ತಿದೆ. ಇದು ಗಾಯದ ಮೇಲೆ ಬರೆ ಎಳೆದ ಸ್ಥಿತಿ ಎಂದು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆಡಳಿತ ವೈಫಲ್ಯದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಪೆಟ್ರೋಲ್, ಡಿಸೇಲ್, ವಿದ್ಯುತ್ ದರ, ನಿತ್ಯ ಬಳಕೆ ವಸ್ತುಗಳು ಸೇರಿದಂತೆ ಎಲ್ಲದರ ಬೆಲೆಯು ಗಗನಕ್ಕೇರಿದೆ ಎಂದು ಆರೋಪಿಸಿದರು.
ಕರೋನ ಸಮಸ್ಯೆಯಿಂದ ಜನರು ದುಡಿಮೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನಡುವೆ ಬೆಲೆ ಏರಿಕೆಯಿಂದಾಗಿ ಜನರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಾಲಿಕೆ ಸದಸ್ಯ ನಾಗರಾಜ ಕಂಕಾರಿ, ಮಾಜಿ ಉಪ ಮೇಯರ್ ಪಾಲಾಕ್ಷಿ, ಪ್ರಮುಖರಾದ ತ್ಯಾಗರಾಜ್, ಸಿದ್ದಪ್ಪ, ರಿಚರ್ಡ್ ಕ್ವಾಡ್ರಸ್, ಭಾಸ್ಕರ್, ಅಬ್ದುಲ್ ವಾಜೀದ್, ಪರಶುರಾಮ್, ರಾಜಮ್ಮ, ಸತೀಶ್, ಮಂಜುನಾಥ್ ನವುಲೆ, ಕವಿತಾ ಶ್ರೀನಿವಾಸ್ ಸೇರಿದಂತೆ ಹಲವರು ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ಇಂತಹ ಘಟನೆಗಳು ನಿಮ್ಮೂರಲ್ಲಿ ನಡೆದರೆ ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200