ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JUNE 2021
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಲಸಿಕೆ ವಿತರಣೆ ವೇಗವನ್ನು ಮತ್ತಷ್ಟು ಹೆಚ್ಚಳ ಮಾಡಬೇಕು ಎಂದು ಕಾಂಗ್ರೆಸ್, ಜೆಡಿಎಸ್ ಕಾರ್ಪೊರೇಟರ್‍ಗಳು ಒತ್ತಾಯಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ಕಾರ್ಪೊರೇಟರ್‍ಗಳು, ಪ್ರತಿ ವಾರ್ಡ್‍ನಲ್ಲೂ ಲಸಿಕೆ ನೀಡುವ ಕಾರ್ಯ ಮಾಡಬೇಕಿದೆ. ವಾರ್ಡ್‍ಗಳಲ್ಲಿ ಇರುವ ಸರ್ಕಾರಿ ಶಾಲೆ, ಅಂಗನವಾಡಿಗಳಲ್ಲಿ ಲಸಿಕೆ ವಿತರಣೆ ಮಾಡಬೇಕು. ಆಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲರಿಗೂ ಶೀಘ್ರದಲ್ಲಿ ಲಸಿಕೆ ನೀಡಲು ಸಾದ್ಯವಾಗಲಿದೆ ಎಂದು ಮನವಿಯಲ್ಲಿ ತಿಳಿಸಿದರು.
ಇದೆ ವೇಳೆ ಚಿಕ್ಕಲ್ ಸರ್ಕಾರಿ ಶಾಲೆಯಲ್ಲಿ ಲಸಿಕೆ ನೀಡಲು ಬೇಕಾದ ವ್ಯವಸ್ಥೆ ಮಾಡಲಾಗುತ್ತದೆ. ಹಾಗೆಯೇ ಮಿಲ್ಲತ್ ಶಾಲೆ ಮತ್ತು ಜೆ.ಪಿ.ನಗರದಲ್ಲೂ ಲಸಿಕೆ ಪಡೆಯಲು ಜನರು ಮುಂದೆ ಬಂದಿದ್ದಾರೆ. ಅವರೆ ಎಲ್ಲ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ. ಇಂತಹ ಕಡೆಗಳಿಗೆ ಲಸಿಕೆಯ ವ್ಯವಸ್ಥೆ ಮಾಡಬೇಕು ಎಂದು ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ಮನವಿ ಮಾಡಿದರು.
ಕಾರ್ಪೊರೇಟರ್‍ಗಳಾದ ಹೆಚ್.ಸಿ.ಯೋಗೇಶ್, ನಾಗರಾಜ ಕಂಕಾರಿ, ಆರ್.ಸಿ.ನಾಯ್ಕ್ , ಕಾಂಗ್ರೆಸ್ ಮುಖಂಡ ರಂಗನಾಥ್ ಸೇರಿದಂತೆ ಹಲವರು ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200