ಖಾಲಿ ಕಾರಲ್ಲಿ ಕೈ ಹಾಕಿದಲೆಲ್ಲ ಸಿಕ್ತು ಗಾಂಜಾ, ಭದ್ರಾವತಿ ಗಡಿಯಲ್ಲಿ ಲಾಕ್ ಆದ ಖತರ್ನಾಕ್ ದಂಧೆಕೋರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 JUNE 2021

ಶಿವಮೊಗ್ಗ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಲಕ್ಷಾಂತರ ಮೌಲ್ಯದ ಗಾಂಜಾ ಸಾಗಣೆ ಮಾಡತ್ತಿದ್ದವನನ್ನು ಬಂಧಿಸಿದ್ದಾರೆ. ಆತನ ಕಾರಿನ ಮೂಲೆ ಮೂಲೆಯಲ್ಲೂ ಗಾಂಜಾ ಅಡಗಿಸಿಟ್ಟಿರುವುದು ಬಯಲಿಗೆ ಬಂದಿದೆ.

ತರೀಕೆರೆಯಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಕಾರನ್ನು ಕಾರೇಹಳ್ಳಿ ಚೆಕ್‍ ಪೋಸ್ಟ್‍ನಲ್ಲಿ ತಡೆದು ತಪಾಸಣೆ ನಡೆಸಿದಾಗ ಗಾಂಜಾ ಇರುವುದು ಬೆಳೆಕಿಗೆ ಬಂದಿದೆ. ಕಾರು ಚಾಲಕ ಮುರುಗ (32) ಎಂಬಾತನನ್ನು ಬಂಧಿಸಲಾಗಿದೆ. ಈತ ಭದ್ರಾವತಿಯ ಸಂಕ್ಲಿಪುರದವನು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖಾಲಿ ಕಾರಿನಲ್ಲಿ ಬೆಚ್ಚಗೆ ಅಡಗಿತ್ತು ಗಾಂಜಾ

ಮಾರುತಿ ಓಮ್ನಿ ಕಾರಿನ ಬಾಗಿಲು, ಡಿಕ್ಕಿ ಬಾಗಿಲು ತೆಗೆದು ತಪಾಸಣೆ ನಡೆಸಲಾಯಿತು. ಆದರೆ ಎಲ್ಲಿಯೂ ಗಾಂಜಾ ಪತ್ತೆಯಾಗಲಿಲ್ಲ. ಬಳಿಕ ಕಾರಿನ ಪೆಟ್ರೋಲ್ ಟ್ಯಾಂಕ್, ಹಿಂಬದಿಯ ಡೋರ್‍ನ ನಡುವೆ, ಹಿಂಭಾಗದ ಬಂಪರ್‍ನ ಒಳಭಾಗ, ಸ್ಲೈಡಿಂಗ್ ಡೋರ್‍ ಒಳಗೆ, ಚಾರ್ಸಿಯಲ್ಲಿ ಗಾಂಜಾ ಪ್ಯಾಕೆಟ್‍ಗಳನ್ನು ಇರಿಸಲಾಗಿತ್ತು.

203969018 1417205225307560 550320305232750891 n.jpg? nc cat=107&ccb=1 3& nc sid=8bfeb9& nc ohc=FJWOS5v eNIAX9gOcl & nc ht=scontent.fblr20 1

ಲಕ್ಷ ಲಕ್ಷ ಮೌಲ್ಯದ ಗಾಂಜಾ

ಮುರುಗ ಚಲಾಯಿಸುತ್ತಿದ್ದ ಕಾರಿನಲ್ಲಿ ಲಕ್ಷ ಲಕ್ಷ ಮೌಲ್ಯದ ಗಾಂಜಾ ಪತ್ತೆಯಾಗಿದೆ. ಒಟ್ಟು 48 ಕೆಜಿ 656 ಗ್ರಾಂ ತೂಕದ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 5.83 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಇನ್ನು, ಮುರುಗನ ಬಳಿ ಇದ್ದ ಮೊಬೈಲ್,  ಕೃತ್ಯಕ್ಕೆ ಬಳಕೆ ಮಾಡಿಕೊಂಡ ಓಮ್ನಿ ಕಾರನ್ನ ವಶಕ್ಕೆ ಪಡೆಯಲಾಗಿದೆ. ಈತನ ವಿರುದ್ದ ಭದ್ರಾವತಿ ಪೇಪರ್ ‍ಟೌನ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‍ಗಳು ಮತ್ತು ಎನ್‍ಡಿಪಿಎಸ್‍ ಕಾಯ್ದೆ ಅಡಿ ಕೇಸ್ ದಾಖಲು ಮಾಡಲಾಗಿದೆ.

ಮೆಕ್ಸಿಕೋದ ಗಾಂಜಾ ಸಾಗಣೆದಾರರ ರೀತಿ

ಮೆಕ್ಸಿಕೋ ದೇಶದ ಡ್ರಗ್ಸ್ ದಂಧೆಕೋರರ ಮಾದರಿಯಲ್ಲೆ ಮುರುಗ ಗಾಂಜಾ ಸಾಗಣೆ ಮಾಡಲು ಯತ್ನಿಸಿದ್ದಾನೆ. ಮೆಕ್ಸಿಕೋದ ಡ್ರಗ್ಸ್ ದಂಧೆಕೋರರು ಡ್ರಗ್ಸ್ ಪ್ಯಾಕೆಟ್‍ಗಳನ್ನು ವಾಹನಗಳ ಟೈರ್‍, ಚಾರ್ಸಿ, ಪೆಟ್ರೋಲ್  ಟ್ಯಾಂಕ್‍, ಡ್ಯಾಶ್ ಬೋರ್ಡ್‍ ಸೇರಿದಂತೆ ವಿವಿಧೆಡೆ ಬಚ್ಚಿಟ್ಟು ಸಾಗಣೆ ಮಾಡುತ್ತಾರೆ. ಅಮೆರಿಕಾದ ಗಡಿಯಲ್ಲಿ ವಿಶೇಷ ತನಿಖಾ ತಂಡ ಇಂತಹ ಡ್ರಗ್ ಪೆಡ್ಲರ್‍ಗಳ ಹೆಡೆಮುರಿ ಕಟ್ಟುತ್ತಿದ್ದಾರೆ.

ಶಿವಮೊಗ್ಗ ಪೊಲೀಸ್ ವಿಶೇಷ ಟೀಂ

ಗಾಂಜಾ ಸಾಗಣೆದಾರರಿಗೆ ಬಿಸಿ ಮುಟ್ಟಿಸಲು ವಿಶೇಷ ತಂಡ ರಚಿಸಲಾಗಿತ್ತು. ಭದ್ರಾವತಿಯ ಹೆಚ್ಚುವರಿ ರಕ್ಷಣಾಧಿಕಾರಿ, ಶಿವಮೊಗ್ಗ ಡಿವೈಎಸ್‍ಪಿ, ಕುಂಸಿ ಠಾಣೆ ಇನ್ಸ್‍ ಪೆಕ್ಟರ್‍ ನೇತೃತ್ವದ ವಿಶೇಷ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.

204751962 1143709169442325 1917981465831900986 n.jpg? nc cat=110&ccb=1 3& nc sid=8bfeb9& nc ohc=Bb82T29 yhsAX9kexyr& nc ht=scontent.fblr20 1

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 29, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment