ಶಿವಮೊಗ್ಗ ಲೈವ್.ಕಾಂ | SAGARA NEWS | 30 JUNE 2021
ತಾಳಗುಪ್ಪದಲ್ಲಿ ನಿಲ್ದಾಣದಲ್ಲಿ ರೈಲು ಹತ್ತುವಾಗ ಆಕಸ್ಮಿಕವಾಗಿ ರೈಲಿನಡಿ ಸಿಲುಕಿ ಕೈ, ಕಾಲು ತುಂಡಾಗಿದ್ದ ಯುವಕನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವಕ ಪ್ರಾಣಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸೋಮವಾರ ರಾತ್ರಿ ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಘಟನೆ ಸಂಭವಿಸಿತ್ತು. ತಾಳಗುಪ್ಪ – ಬೆಂಗಳೂರು ರೈಲು ಹತ್ತುವಾಗ ನವೀನ್ (18) ಪ್ಲಾಟ್ಫಾರಂನಿಂದ ಜಾರಿಬಿದ್ದಿದ್ದ.
ಸಾಗರದಿಂದ ಮಂಗಳೂರಿಗೆ ಶಿಫ್ಟ್
ಘಟನೆ ಬಳಿಕ ನವೀನ್ನನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ಮುಂದುವರೆದಿದೆ. ನವೀನ್ ಪ್ರಾಣಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ | ತಾಳಗುಪ್ಪ – ಬೆಂಗಳೂರು ರೈಲಿನಡಿ ಸಿಲುಕಿ ಯುವಕನ ಕಾಲು ಕಟ್
ನೆರವಾದ ಜನಪ್ರತಿನಿಧಿಗಳು, ಚಾಲಕರು
ಯುವಕನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಸಾಗರ ನಗರಸಭೆ ಸದಸ್ಯ ಸಂತೋಷ್ ಶೇಟ್, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಅಶೋಕ ಬರದವಳ್ಳಿ ನೆರವಾಗಿದ್ದಾರೆ. ಆಂಬುಲೆನ್ಸ್ ಚಾಲಕ ಸುಹೇಲ್ ಮತ್ತು ಸಂದೀಪ್ ಅವರು ನವೀನ್ನನ್ನು ಉಚಿತವಾಗಿ ತಮ್ಮ ಆಂಬುಲೆನ್ಸ್ನಲ್ಲಿ ಮಂಗಳೂರಿಗೆ ಕರೆದೊಯ್ದು ಮಾನವೀಯತೆ ಮೆರೆದಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200