ಬಸ್ ನಿಲ್ದಾಣದಲ್ಲಿ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2021

ಬಸ್ ತಂಗುದಾಣದಲ್ಲಿ ಮಹಿಳೆಯೊಬ್ಬರ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಮೃತಳನ್ನು ಲತಾ ಎಂದು ಗುರುತಿಸಲಾಗಿದೆ. ನಿರ್ಗತಿಕಳಾಗಿದ್ದ ಈಕೆ ಎನ್‍.ಟಿ.ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿ ಬಳಿ ಬಸ್ ನಿಲ್ದಾಣದ ಬಳಿ ಇದ್ದರು.

ಮಲಗಿದ್ದಾಗ ಲತಾಳ ತಲೆ ಮೇಲೆ ಸಿಮೆಂಟ್ ಸ್ಲಾಬ್ ಎತ್ತಿ ಹಾಕಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

SHIVAMOGGA-CITY-TALUK-NEWS-

Leave a Comment