ಅರಸಾಳು ರೈಲ್ವೆ ನಿಲ್ದಾಣದ ಮಾಲ್ಗುಡಿ ಮ್ಯೂಸಿಯಂ ಪುನಾರಂಭಕ್ಕೆ ಡೇಟ್ ಫಿಕ್ಸ್

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2021

ಲಾಕ್‍ ಡೌನ್ ಹಿನ್ನೆಲೆ ಬಂದ್ ಆಗಿದ್ದ ಮಾಲ್ಗುಡಿ ಮ್ಯೂಸಿಯಂ ಪುನಾರಂಭವಾಗುತ್ತಿದೆ. ಈ ಸಂಬಂಧ ರೈಲ್ವೆ ಇಲಾಖೆ ಪ್ರಕಟಣೆ ಹೊರಡಿಸಿದೆ. ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಅರಸಾಳು ರೈಲ್ವೆ ನಿಲ್ದಾಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂ ಜುಲೈ 9ರಿಂದ ಪುನಾರಂಭವಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಸಾರ್ವಜನಿಕರ ಪ್ರವೇಶಕ್ಕೆ ಮ್ಯೂಸಿಯಂ ಮುಕ್ತವಾಗಿರಲಿದೆ. ಪ್ರತಿ ಮಂಗಳವಾರ ವಾರದ ರಜೆ ಇರಲಿದೆ.

ಮ್ಯೂಸಿಯಂಗೆ ಭೇಟಿ ನೀಡುವವರು ಕೋವಿಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಮಾಡಿಕೊಳ್ಳುವುದು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ನೈಋತ್ಯ ರೈಲ್ವೆಯ ಡಿವಿಷನಲ್ ಮ್ಯಾನೇಜರ್ ರಾಹುಲ್ ಅಗರ್‍ವಾಲ್ ತಿಳಿಸಿದ್ದಾರೆ.

ಆರ್.ಕೆ.ನಾರಾಯಣ್ ಅವರ ಕೃತಿ ಆಧರಿಸಿ ನಟ, ನಿರ್ದೇಶಕ ಶಂಕರ್‍ ನಾಗ್ ಅವರು ಮಾಲ್ಗುಡಿ ಡೇಸ್‍ ಧಾರವಾಹಿ ನಿರ್ಮಿಸಿದ್ದರು. ಅರಸಾಳು ರೈಲ್ವೆ ನಿಲ್ದಾಣದಲ್ಲೂ ಧಾರವಾಹಿ ಚಿತ್ರೀಕರಣವಾಗಿತ್ತು. ಹಾಗಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿ ಮಾಲ್ಗುಡಿ ಮ್ಯೂಸಿಯಂ ನಿರ್ಮಿಸಲಾಗಿದೆ. ಇತ್ತೀಚೆಗಷ್ಟೆ ಉದ್ಘಾಟನೆಯಾಗಿದ್ದರೂ, ಮಾಲ್ಗುಡಿ ಮ್ಯೂಸಿಯಂ ಪ್ರವಾಸಿಗರನ್ನು ದೊಡ್ಡ ಸಂಖ್ಯೆಯಲ್ಲಿ ಸೆಳೆದಿತ್ತು. ಕೋವಿಡ್ ಕಾರಣದಿಂದಾಗಿ ಮ್ಯೂಸಿಯಂ ಬಂದ್ ಮಾಡಲಾಗಿತ್ತು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

Leave a Comment