ಶಿವಮೊಗ್ಗ ಲೈವ್.ಕಾಂ | SHIKARIPURA NEWS | 7 ಜುಲೈ 2021
ತುಂಗಭದ್ರಾ ನದಿ ಸಮೀಪ ನಿರ್ಮಿಸಿರುವ ಜಾಕ್‍ವೆಲ್‍ನಿಂದ ಪ್ರಯೋಗಿಕವಾಗಿ ನೀರು ಹರಿಸುವ ಕಾರ್ಯ ಯಶಸ್ವಿಯಾಗಿದೆ. ಇದು ಶಿಕಾರಿಪುರ ತಾಲೂಕಿನ ರೈತರಲ್ಲಿ ಮಂದಹಾಸ ಮೂಡಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕು ಚಟ್ನಳ್ಳಿ ಬಳಿ ಜಾಕ್‍ವೆಲ್ ನಿರ್ಮಿಸಲಾಗಿದೆ. ಇದರಿಂದ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯ ನಡೆಯಿತು. ನದಿ ನೀರನ್ನು ಎತ್ತಿ ಪೈಪ್ ಲೈನ್ ಮೂಲಕ ಹರಿಸಲಾಯಿತು. ಮೇದೂರು ಗ್ರಾಮದ ಹಳ್ಳಕ್ಕೆ ಪೈಪ್‍ಲೈನ್ ಮೂಲಕ ನೀರು ಹರಿಸಲಾಯಿತು.
ಪ್ರಯೋಗಿಕವಾಗಿ ನೀರು ಹರಿಸುವ ಕಾರ್ಯ ಯಶಸ್ವಿಯಾಗಿದ್ದು, ಪೈಪ್‍ಗಳನ್ನು ಅಳವಡಿಸುವ ಕಾರ್ಯ ಬಾಕಿ ಇದೆ. ಈ ಪೈಪ್‍ಗಳ ಮೂಲಕವೆ ಕೆರಗಳಿಗೆ ನೀರು ಹರಿದು ಬರಲಿದೆ.
ಶಿಕಾರಿಪುರ ತಾಲೂಕಿನ ಉಡುಗಣಿ, ತಾಳಗುಂದ, ಹೊಸೂರು ಹೋಬಳಿಯ ಕೆರೆಗಳನ್ನು ತುಂಬಿಸುವ ಯೋಜನೆ ಇದೆ. ತಾಲೂಕಿನ 249 ಕೆರೆಗಳಿಗೆ ನೀರು ಹರಿಯಲಿದೆ. ಇನ್ನು ಹಾವೇರಿ ಜಿಲ್ಲೆಯ ಹಿರೇಕೆರೂರಿನ 6 ಕೆರೆಗಳಿಗೂ ಈ ಯೋಜನೆಯಿಂದ ನೀರು ಹರಿಸಲಾಗುತ್ತದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200