ಶಿವಮೊಗ್ಗ ಲೈವ್.ಕಾಂ | AYANUR NEWS | 7 ಜುಲೈ 2021
ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಆಯನೂರಿನ ಡಾಂಬರ್ ಫ್ಯಾಕ್ಟರಿ ಬಳಿ ಘಟನೆ ಸಂಭವಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುರೇಶ್ (23) ಮೃತ ಬೈಕ್ ಸವಾರ. ತನ್ನ ಅಣ್ಣನ ಬೈಕ್‍ನಲ್ಲಿ ಚೋರಡಿಯಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದಾಗ ಘಟನೆ ಸಂಭವಿಸಿದೆ.
ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಬಂದು ಬೈಕ್ ಡಿಕ್ಕಿ ಹೊಡೆದಿದೆ. ಅತಿ ವೇಗದಲ್ಲಿದ್ದು ಅಪಘಾತಕ್ಕೀಡಾದ ಹಿನ್ನೆಲೆ ಸುರೇಶ್ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ.
ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200