ಬಂಗಾರಪ್ಪ ಮಾಸ್ಕ್ ಧರಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2021

ಸೋಗಾನೆಯಲ್ಲಿ ನಿರ್ಮಾಣ ಆಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಹೆಸರು ಇಡಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ವಿದ್ಯಾರ್ಥಿ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಬಂಗಾರಪ್ಪ ಅವರ ಭಾವಚಿತ್ರದ ಮಾಸ್ಕ್ ಧರಿಸಿ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಧರಣಿ ನಡೆಸಿ, ಮನವಿ ಸಲ್ಲಿಸಿದರು.

ಬಂಗಾರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಬಡವರು, ರೈತರು, ವಿದ್ಯಾರ್ಥಿಗಳಿಗಾಗಿ ಹಲವು ಯೋಜನೆಗಳನ್ನು ರೂಪಿಸಿದ್ದರು.  ಅವರಿಂದಾಗಿ ಇವತ್ತು ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ ಎಂದು ಸಂಘಟನೆ ಪ್ರಮುಖರು ತಿಳಿಸಿದರು.

ಹಲವು ಪಕ್ಷದ ರಾಜಕಾರಣಿಗಳು ಬಂಗಾರಪ್ಪ ಅವರ ಗರಡಿಯಲ್ಲೆ ಬೆಳೆದವರು. ಆದ್ದರಿಂದ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಬೇಕು ಎಂದು ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದರು.

ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ವಿನಯ್ ಕೆ.ಸಿ.ರಾಜಾವತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಸೊರಬ ತಾಲೂಕು ಅಧ್ಯಕ್ಷ ಜೀವನ್, ವೆಂಕಟೇಶ ನಾಯ್ಕ, ಸಯ್ಯದ್, ಚಂದನ್, ಪವನ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

203044815 1148179448995297 4099900154580379732 n.jpg? nc cat=100&ccb=1 3& nc sid=730e14& nc ohc=EB7AAr6Q0TkAX9CDOlV&tn=XgSJ3kUX1No5RJvs& nc ht=scontent.fblr1 6

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment