ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜುಲೈ 2021
ಜಿಲ್ಲೆಯಾದ್ಯಂತ ಮತ್ತೆ ಮಳೆಯಾಗುತ್ತಿದೆ. ಇವತ್ತು ಬೆಳಗ್ಗೆಯಿಂದ ವರುಣ ಪ್ರತ್ಯಕ್ಷವಾಗಿದ್ದಾನೆ. ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಳೆಯಿಂದಾಗಿ ತಂಪು ವಾತಾವರಣವಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಳೆಯಿಂದಾಗಿ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಮೆಕ್ಕೆಜೋಳ, ಶುಂಠಿ, ಭತ್ತದ ನಾಟಿ ಮಾಡಿದ್ದ ರೈತರು ಬೆಳೆ ನಷ್ಟದ ಭೀತಿಯಲ್ಲಿದ್ದರು. ಮಳೆ ಇಲ್ಲದೆ ಈ ಬೆಳೆಗಳಿಗೆ ನೀರು ಇಲ್ಲದಂತಾಗಿತ್ತು. ಈಗ ಮಳೆ ಪುನಾರಂಭವಾಗಿದೆ. ಸದ್ಯ ಮೋಡ ಕವಿದ ವಾತಾವರಣವಿದ್ದು, ಮತ್ತಷ್ಟು ಮಳೆಯಾಗುವ ಸಂಭವವಿದೆ.
ಜುಲೈ 7ರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಅಲ್ಲದೆ ಯಲ್ಲೋ ಅಲರ್ಟ್ ಕೂಡ ಘೋಷಿಸಿತ್ತು. ಆದರೆ ಕಳೆದ ಎರಡು ದಿನ ಮಳೆಯಾಗಿರಲಿಲ್ಲ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200