ಜೋಗ ಜಲಪಾತ ವೀಕ್ಷಣೆಗೆ ಬರ್ತಿಲ್ಲ ಜನ, ವೀಕೆಂಡ್ ಲಾಕ್ಡೌನ್ ತೆರವು ಕಾರಣಾನಾ?

ಶಿವಮೊಗ್ಗ ಲೈವ್.ಕಾಂ | SAGARA NEWS | 9 ಜುಲೈ 2021

ಜೋಗ ಜಲಪಾತ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದೆ. ವೀಕೆಂಡ್‍ನಲ್ಲಿ ಹೆಚ್ಚಿನ ಪ್ರವಾಸಿಗರು ಜೋಗಕ್ಕೆ ಬರುವ ನಿರೀಕ್ಷೆ ಇದೆ.

ಜಲಪಾತದ ಹಿನ್ನೀರು ಭಾಗದಲ್ಲಿ ಮಳೆಯಾಗುತ್ತಿದೆ. ಹಾಗಾಗಿ ಜೋಗ ಜಲಪಾತದ ರಾಜಾ, ರಾಣಿ, ರೋರರ್, ರಾಕೆಟ್ ಜಲಪಾತಗಳು ಧುಮ್ಮಿಕ್ಕುತ್ತಿವೆ. ಇದು ನಯನ ಮನೋಹರ ದೃಶ್ಯವಾಗಿದೆ.

ಲಾಕ್‍ಡೌನ್ ಬಳಿಕ ಆರಂಭಿಕ ಉತ್ಸಾಹ

ಲಾಕ್‍ ಡೌನ್ ಹಿನ್ನೆಲೆ ಜೋಗ ಜಲಪಾತಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ ಲಾಕ್ ಡೌನ್‍ಗೆ ರಿಲೀಫ್‍ ಸಿಗುತ್ತಿದ್ದಂತೆ ಆರಂಭದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಲಪಾತ ವೀಕ್ಷಣೆಗೆ ಬಂದಿದ್ದರು. ಆ ಬಳಿಕ ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದೆ. ಸಾಮಾನ್ಯವಾಗಿ ಈ ಹೊತ್ತಿನಲ್ಲಿ ಹೆಚ್ಚಿನ ಪ್ರವಾಸಿಗರು ಜೋಗಕ್ಕೆ ಬರುತ್ತಿದ್ದರು, ಇಲ್ಲಿ ಫೋಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದರು.

Kalleshwara-Enterprises.webp

ವೀಕೆಂಡ್‍ನಲ್ಲಿ ಪ್ರವಾಸಿಗರ ನಿರೀಕ್ಷೆ

ಈ ಬಾರಿ ವೀಕೆಂಡ್ ಕರ್ಫ್ಯೂ ಇಲ್ಲ. ಜೋಗ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ಎರಡನೆ ಶನಿವಾರ ಮತ್ತು ಭಾನುವಾರ ಇರುವ ಕಾರಣ  ಈ ವೀಕೆಂಡ್‍ನಲ್ಲಿ ದೊಡ್ಡ ಸಂಖ್ಯೆಯ ಪ್ರವಾಸಿಗರು ಜೋಗಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಜೋಗ ಜಲಪಾತ ವೀಕ್ಷಣೆಗೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಕೋವಿಡ್ ನಿಯಮ ಪಾಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸೂಚಿಸಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment