ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2021
ನಾನು ನಿಮಗೆ ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ. ಸುಮಲತಾ ಮತ್ತು ಕುಮಾರಸ್ವಾಮಿಯವರ ವಿಚಾರ ಬಿಟ್ಟು ಬಿಡಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಮಾಧ್ಯಮದವರಿಗೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ನಿಮಗೆ ಬೇರೆ ಯಾವ ವಿಚಾರವೂ ಇಲ್ವಾ. ದೇಶದಲ್ಲಿ ಬೇಕಾದಷ್ಟು ಸಮಸ್ಯೆಗಳು ಇವೆ. ಅದನ್ನು ಬಿಟ್ಟು ಅವರು ಏನ್ ಹೇಳಿದ್ರು, ಇವರೇನು ಹೇಳಿದ್ರು ಅಂತ ತೋರಿಸುತ್ತೀರಾ. ಇದಕ್ಕೇನಾದ್ರು ಅರ್ಥ ಇದೆಯಾ ಎಂದು ಪ್ರಶ್ನಿಸಿದರು.
ಕೆಆರ್ಎಸ್ ಬಿರುಕು ವಿಚಾರದ ಕುರಿತು ಈಗಾಗಲೆ ಮುರುಗೇಶ್ ನಿರಾಣಿ ಸರ್ಕಾರದ ಪರವಾಗಿ ಹೇಳಿಕೆ ಕೊಟ್ಟಿದ್ದಾರೆ. ನಾನು ಅವರಿಬ್ಬರ ಬಗ್ಗೆ ಟೀಕೆ ಮಾಡಲು ಹೋಗಲ್ಲ. ಸಹೋದರಿ ಸುಮಲತಾ ಹಾಗೂ ಕುಮಾರಸ್ವಾಮಿ ಇಬ್ಬರ ಬಗ್ಗೆಯೂ ನನಗೆ ಗೌರವವಿದೆ. ಅವರಿಬ್ಬರು ವಾಗ್ವಾದ ನಿಲ್ಲಿಸಬೇಕು. ಅವರು ನಿಲ್ಲಿಸುತ್ತಾರೋ ಇಲ್ಲವೋ, ಟಿವಿಯವರು ಮೊದಲು ನಿಲ್ಲಿಸಿ ಎಂದು ಹೇಳಿದರು.
ಅವರಿಬ್ಬರು ಎಳೆದು ಕೊಂಡು ಹೋಗ್ತಾರೆ, ನೀವು ಹೋಗ್ತಿರಾ ಎಂದು ಗರಂ ಆದರು. ಜನ ಸಾಯ್ತಿದ್ದಾರೆ ಅದರ ಬಗ್ಗೆ ನೋಡಿ. ನಾನು ಮಾಧ್ಯಮದವರನ್ನು ಟೀಕೆ ಮಾಡುತ್ತಿದ್ದೇನೆ ಅಂದುಕೊಳ್ಳಬೇಡಿ ಎಂದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






