ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 11 ಜುಲೈ 2021
ತುಂಗಾ ನದಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ತೇಲಿ ಬಂದಿದೆ. ಪೊಲೀಸರು ಶವವನ್ನು ಮೇಲೆತ್ತಿದ್ದು, ತನಿಖೆ ನಡೆಸುತ್ತಿದ್ದಾರೆ.
ತೀರ್ಥಹಳ್ಳಿಯ ಬಾಳೇಬೈಲು ಸಮೀಪ ತುಂಗಾ ನದಿಯಲ್ಲಿ ಮೃತದೇಹ ತೇಲಿ ಬರುತ್ತಿರುವುದನ್ನು ಗ್ರಾಮಸ್ಥರು ಗಮನಿಸಿದ್ದರು. ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಅಗ್ನಿಶಾಮಕ ದಳದ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ನದಿಯಿಂದ ಮೇಲೆತ್ತಿದ್ದಾರೆ.
ಅಪರಿಚಿತನಿಗೆ ಸುಮಾರು 50 ವರ್ಷ ಇರಬಹುದು ಎಂದು ಶಂಕಿಸಲಾಗಿದೆ. ಮೃತದೇಹವನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ರವಾನಿಸಲಾಗಿದೆ.
ತುಂಗಾ ನದಿ ತುಂಬಿ ಹರಿಯುತ್ತಿದೆ. ಮೃತದೇಹ ಬೇರೆಲ್ಲಿಂದಲೋ ಕೊಚ್ಚಿ ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






