ಕಾರ್ಯಕರ್ತನಿಗೆ ಡಿಕೆಶಿಯಿಂದ ಕಾಪಾಳಮೋಕ್ಷ ಕೇಸ್, ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಮುಖಂಡನಿಂದ ವಾರ್ನಿಂಗ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021

ಪಕ್ಷದ ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೈ ಮಾಡಿದ ಪ್ರಕರಣವನ್ನೇ ದೊಡ್ಡ ಪ್ರಕರಣ ಎಂದು ಬಿಂಬಿಸುವ ಬಿಜೆಪಿ ರಾಜ್ಯಾಧ್ಯಕ್ಷರು ಮೊದಲು ತಮ್ಮ ಪಕ್ಷದಲ್ಲಿರುವ ಹುಳುಕುಗಳನ್ನು ಸರಿಪಡಿಸಿಕೊಳ್ಳಲಿ ಎಂದು ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಗಲ ಮೇಲೆ ಕೈಹಾಕಿದ್ದ ಕಾರ್ಯಕರ್ತನಿಗೆ ಶಿಸ್ತು ಪಾಲಿಸುವಂತೆ ಪ್ರೀತಿಯಿಂದ ಒಂದೇಟು ಕೊಟ್ಟಿದ್ದನ್ನೆ ಮಹಾಪರಾಧ ಎಂದು ಬಿಂಬಿಸುವುದು ಸರಿಯಲ್ಲ. ಈ ಹಿಂದೆ ಬಿಜೆಪಿ ನಾಯಕರು ಕೂಡ ಕಾರ್ಯಕರ್ತರು ಹಾಗೂ ಇತರರ ಮೇಲೆ ಕೈಮಾಡಿರುವ ಘಟನೆ ನಡೆದಿದೆ. ಇದು ನಮ್ಮ ಪಕ್ಷದ ಆಂತರಿಕ ವಿಚಾರ. ಇದರಲ್ಲಿ ಬಿಜೆಪಿಯವರು ಮೂಗು ತೂರಿಸುವ ಅಗತ್ಯವಿಲ್ಲ ಎಂದರು.

ಇದೇ ರೀತಿ ಬಿಜೆಪಿ ನಾಯಕರ ವರ್ತನೆ ಮಿತಿಮೀರಿದರೆ ಪಕ್ಷದ ವತಿಯಿಂದ ಮುಖ್ಯಮಂತ್ರಿ ಹಾಗೂ ಸಚಿವರ ಕಾರ್ಯಕ್ರಮಗಳಲ್ಲಿ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಐಎನ್‍ಟಿಯುಸಿ ಮಹಿಳಾ ವಿಭಾಗದ ಅಧ್ಯಕ್ಷೆ ಕವಿತಾ ರಾಘವೇಂದ್ರ, ಜಿಲ್ಲಾಧ್ಯಕ್ಷ ಅರ್ಜುನ್, ನಿಶಾದ್ ಅಹಮ್ಮದ್, ನಿಹಾಲ್ ಸಿಂಗ್, ರಾಘವೇಂದ್ರ ಇದ್ದರು.

217389951 1153288501817725 4096501658035425233 n.jpg? nc cat=102&ccb=1 3& nc sid=730e14& nc ohc=NI8ByLd 2YQAX eTTxq&tn=XgSJ3kUX1No5RJvs& nc ht=scontent.fblr1 6

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 12, 2021

Leave a Comment