ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಜೋರು, ಹೊಸನಗರದಲ್ಲಿ ಅತ್ಯಧಿಕ, ತೀರ್ಥಹಳ್ಳಿ, ಸಾಗರದಲ್ಲೂ ವರ್ಷಧಾರೆ ಅಬ್ಬರ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021 ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಜೋರಾಗಿದೆ. ಹೊಸನಗರ ತಾಲೂಕಿನಲ್ಲಿ ದಾಖಲೆ ಪ್ರಮಾಣದ ಮಳೆ ಸುರಿಯುತ್ತಿದೆ. ಇದರಿಂದಾಗಿ ಜಿಲ್ಲೆಯ ಹಳ್ಳ ಕೊಳ್ಳಗಳಿಗೆ ನೀರಿನ ಹರಿವು ಹೆಚ್ಚಳವಾಗಿದೆ.

ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಸರಾಸರಿ 59.31 ಮಿ.ಮೀ ಮಳೆಯಾಗಿದೆ. ಈ ತಿಂಗಳಲ್ಲಿ ಇದು ಅತ್ಯಧಿಕ ಪ್ರಮಾಣದ ಮಳೆಯಾಗಿದೆ.

ಶಿವಮೊಗ್ಗ ತಾಲೂಕಿನಲ್ಲಿ 18 ಮಿ.ಮೀ, ಭದ್ರಾವತಿಯಲ್ಲಿ 48.20 ಮಿ.ಮೀ, ತೀರ್ಥಹಳ್ಳಿ 79.60 ಮಿ.ಮೀ, ಸಾಗರದಲ್ಲಿ 70.80 ಮಿ.ಮೀ, ಶಿಕಾರಿಪುರದಲ್ಲಿ 27 ಮಿ.ಮೀ, ಸೊರಬದಲ್ಲಿ 29.20 ಮಿ.ಮೀ ಮಳೆಯಾಗಿದೆ.

ಹೊಸಗರದಲ್ಲಿ ಅಧಿಕ ಮಳೆ

ಹೊಸನಗರ ತಾಲೂಕಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ತಾಲೂಕಿನಲ್ಲಿ 142.40 ಮಿ.ಮೀ ಮಳೆಯಾಗಿದೆ. ಈ ಮಳೆಗಾಲದಲ್ಲಿ ಇದು ಅತ್ಯಧಿಕ ಮಳೆಯಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment