ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021
ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದ ಎಡೆ ಮತ್ತು ಬಲ ದಂಡೆ ನಾಲೆಗಳಿಗೆ ಜುಲೈ 23ರಿಂದ ನೀರು ಹರಿಸಲು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ತಿಳಿಸಿದರು.
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ನಡೆದ ಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಪವಿತ್ರಾ ರಾಮಯ್ಯ, ಜುಲೈ 23ರ ಮಧ್ಯರಾತ್ರಿಯಿಂದ 120 ದಿನಗಳ ಕಾಲ ಎಡ, ಬಲ ದಂಡೆ ನಾಲೆಗಳಿಗೆ ನೀರು ಹರಿಸಲಾಗುವುದು ಎಂದು ತಿಳಿಸಿದರು.
ಶಾಖಾ ನಾಲೆಗಳಿಗೂ ನೀರು
ಸಲಹಾ ಸಮಿತಿ ಸದಸ್ಯರು, ರೈತರೊಂದಿಗೆ ಚರ್ಚೆ ನಡೆಸಿ, ಆನವೇರಿ, ದಾವಣಗೆರೆ, ಮಲೆಬೆನ್ನೂರು ಮತ್ತು ಹರಿಹರ ಶಾಖಾ ನಾಲೆಗಳಲ್ಲಿ ನೀರು ಹರಿಸಲು ನಿರ್ಧಾರ ಕೈಗೊಂಡಿದ್ದೇವೆ ಎಂದು ಪವಿತ್ರಾ ರಾಮಯ್ಯ ತಿಳಿಸಿದರು.
ಜುಲೈ 14 ರಂದು ಜಲಾಶಯದಲ್ಲಿ ನೀರಿನ ಮಟ್ಟ 157.4 ಅಡಿಗಳಷ್ಟಿದೆ. ಸದ್ಯ 40.484 ಟಿಎಂಸಿ ನೀರಿನ ಸಂಗ್ರಹವಿದೆ. ಇದರಲ್ಲಿ 8.50 ಟಿ.ಎಂ.ಸಿ ಡೆಡ್ ಸ್ಟೋರೇಜ್ ಪ್ರಮಾಣವಾಗಿದೆ. 26.652 ಟಿಎಂಸಿ ಬಳಕೆ ಮಾಡಿಕೊಳ್ಳಬಹುದಾಗಿದೆ. ಭದ್ರಾ ಬಲದಂಡೆ ಕಾಲುವೆಗೆ ಪ್ರತಿದಿನ ಸರಾಸರಿ 3050 ಕ್ಯೂಸೆಕ್ಸ್ ಮತ್ತು ಭದ್ರಾ ಎಡದಂಡೆ ಕಾಲುವೆಗೆ 490 ಕ್ಯೂಸೆಕ್ ಸೇರಿ ಒಟ್ಟು 3540 ಕ್ಯೂಸೆಕ್ ಬೇಡಿಕೆ ಇದೆ ಎಂದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು
- ಶಿವಮೊಗ್ಗದಲ್ಲಿ ಮಲ್ನಾಡ್ ಸ್ಟಾರ್ಟ್ಅಪ್ ಸಮ್ಮೇಳನಕ್ಕೆ ಚಾಲನೆ, ಕೇಂದ್ರ ಸಚಿವರು ಏನೆಲ್ಲ ಹೇಳಿದರು?
- ಭದ್ರಾವತಿಯಲ್ಲಿ ಭೀಕರ ಅಪಘಾತ, ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು
- ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮಿನಿಸ್ಟರ್ ವಾರ್ನಿಂಗ್, ಕಾರಣವೇನು?
- ಶಿವಮೊಗ್ಗ ಸಿಟಿ ಬಸ್ಸುಗಳ ಚಾಲಕರಿಗೆ ಬಿಸಿ ಮುಟ್ಟಿಸಿದ ಟ್ರಾಫಿಕ್ ಪೊಲೀಸ್
- ಶಿವಮೊಗ್ಗದಲ್ಲಿ ಬಸ್ ಡಿಕ್ಕಿ, ಗುಂಡಿಗೆ ಬಿದ್ದ ಸ್ಕೂಟಿ, ಬಾಲಕಿ ಬಲಗಾಲಿಗೆ ಗಂಭೀರ ಗಾಯ