ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2021
ಶಿವಮೊಗ್ಗ ನಗರದಲ್ಲಿ ಮೊಬೈಲ್ ಕಳ್ಳತನದ ಮತ್ತೊಂದು ಪ್ರಕರಣ ವರದಿಯಾಗಿದೆ. ನಗರದ ಹೊಳೆ ಬಸ್ ಸ್ಟಾಪ್ ಬಳಿ ಖಾಸಗಿ ಕಂಪನಿಯೊಂದರ ಉದ್ಯೋಗಿಯ ಮೊಬೈಲ್ ಕಳವು ಮಾಡಲಾಗಿದೆ.
ಗೌತಮ್ ಎಂಬುವವರಿಗೆ ಸೇರಿದ ಮೊಬೈಲನ್ನು ಖದೀಮರು ಕದ್ದೊಯ್ದಿದ್ದಾರೆ. ಕೆಲಸ ಮುಗಿಸಿಕೊಂಡು ರಾತ್ರಿ 9.30ರ ಹೊತ್ತಿಗೆ ಹೊಳೆ ಬಸ್ ಸ್ಟಾಪ್ ಬಳಿ ಬಂದಿದ್ದಾರೆ. ಈ ಸಂದರ್ಭ ಕರೆ ಬಂದಿದ್ದರಿಂದ ಮೊಬೈಲ್ನಲ್ಲಿ ಮಾತನಾಡಿದ್ದಾರೆ. ನಂತರ ತಮ್ಮ ಬ್ಯಾಗ್ನಲ್ಲಿ ಮೊಬೈಲ್ ಇರಿಸಿ, ಮನೆ ಕಡೆ ಹೊರಟಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ರಾತ್ರಿ ನಿಲ್ಲಿಸಿದ್ದ ಕಾರು ಬೆಳಗ್ಗೆ ನಾಪತ್ತೆ
ಮನೆಯಲ್ಲಿ ಬ್ಯಾಗ್ ತೆಗೆದಾಗ ಮೊಬೈಲ್ ಇರಲಿಲ್ಲ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಹೊಳೆ ಬಸ್ ಸ್ಟಾಪ್ ಬಳಿ ತಾವು ಮೊಬೈಲ್ನಲ್ಲಿ ಮಾತನಾಡುತ್ತಿದ್ದಾಗ, ತಮ್ಮ ಹಿಂದೆ ಮೂವರು ಯುವಕರು ಬೈಕ್ನಲ್ಲಿ ಬಂದು ನಿಂತಿದ್ದರು. ಅವರೆ ಈ ಕೃತ್ಯ ಎಸಗಿರಬಹುದು ಎಂದು ಗೌತಮ್ ಶಂಕೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ | ವಿನೋಬನಗರ ಎಪಿಎಂಸಿಯಲ್ಲಿ ಕಳ್ಳರ ಕೈಚಳಕ, ತರಕಾರಿ ಕೊಳ್ಳಲು ಬಂದವರ ಮೊಬೈಲ್ ಎಸ್ಕೇಪ್
ಕೋಟೆ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ನಗರದಲ್ಲಿ ಮೊಬೈಲ್ ಕಳ್ಳರ ಹಾವಳಿಗೆ ಕಡಿವಾಣ ಇಲ್ಲವಾಗಿದೆ. ಮೊಬೈಲ್ನಲ್ಲಿ ಮಾತನಾಡುತ್ತ ಹೋಗುವಾಗ ಕಿತ್ತುಕೊಂಡು ಹೋಗುವುದು, ಮೇಲಿನ ಜೇಬಿನಲ್ಲಿ ಇರಿಸಿದ ಮೊಬೈಲ್ನನ್ನು ಲಪಟಾಯಿಸುವುದು, ಗಮನ ಬೇರೆಡೆ ಸೆಳೆದು ಮೊಬೈಲ್ ಕಿತ್ತೊಯ್ಯುವುದು ಸೇರಿದಂತೆ ಹಲವು ಬಗೆಯ ಪ್ರಕರಣಗಳು ನಗರದಲ್ಲಿ ವರದಿಯಾಗುತ್ತಿದೆ.
ಇದನ್ನೂ ಓದಿ | ಕದ್ದ ಮೊಬೈಲ್‌ಗಳನ್ನು ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಬಳಿ ಮಾರುತ್ತಿದ್ದವನು ಅರೆಸ್ಟ್, ಎಷ್ಟು ಮೊಬೈಲ್ ಸಿಕ್ಕಿವೆ?
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು