ಭದ್ರಾ ನದಿಗೆ ವಿಶೇಷ ಪೂಜೆ, ಶಾಸಕರ ಕುಟುಂಬದಿಂದ ಜಲಾಶಯಕ್ಕೆ ಬಾಗಿನ ಅರ್ಪಣೆ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಆಗಸ್ಟ್ 2021 ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಭದ್ರಾ ಜಲಾಶಯದಲ್ಲಿ ಭದ್ರಾ ನದಿಗೆ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರು ಕುಟುಂಬ ಸಹಿತ ಬಾಗಿನ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು.

ಜಲಾಶಯದ ಪ್ರವಾಸಿ ಮಂದಿರದ ಕಡೆಯಲ್ಲಿ ಬಾಗಿನ ಅರ್ಪಿಸಿದ ಶಾಸಕ ಸಂಗಮೇಶ್ವರ್ ಅವರ ಕುಟುಂಬವರು, ವಿಶೇಷ ಪೂಜೆ ಸಲ್ಲಿಸಿದರು. ಸಂಗಮೇಶ್ವರ್ ಅವರ ಸಹೋದರ ಮೋಹನ್, ಪುತ್ರರಾದ ಗಣೇಶ್, ಬಸವೇಶ್ ಸೇರಿದಂತೆ ಹಲವರು ಈ ಸಂದರ್ಭ ಇದ್ದರು. ಭದ್ರಾವತಿ ಮತ್ತು ಭದ್ರಾ ಜಲಾಶಯದ ಸುತ್ತಮುತ್ತಲ ಗ್ರಾಮಗಳ ಕಾಂಗ್ರೆಸ್ ಕಾರ್ಯಕರ್ತರು, ಸಂಗಮೇಶ್ವರ್ ಅವರ ಅಭಿಮಾನಿಗಳು ಭಾಗವಹಿಸಿದ್ದರು.

ನಾನು ಶಾಸಕನಾದಾಗಲೆಲ್ಲ ಭದ್ರೆ ಭರ್ತಿ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸಂಗಮೇಶ್ವರ್ ಅವರು, ನಾನು ಶಾಸಕನಾದಾಗಲೆಲ್ಲ ಭದ್ರಾ ಜಲಾಶಯ ಭರ್ತಿಯಾಗಿದೆ. ಲಕ್ಷಾಂತರ ರೈತರಿಗೆ ಇದರಿಂದ ಅನುಕೂಲವಾಗುತ್ತಿದೆ ಎಂದು ತಿಳಿಸಿದರು.

ಬಾಗಿನ ಅರ್ಪಣೆಯ ವಿಡಿಯೋ ವರದಿ ಇಲ್ಲಿದೆ

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment