ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಜೋರು, ಬಿಡುವು ಕೊಡದ ವರುಣ, ಹೊಸನಗರದಲ್ಲಿ ಅತ್ಯಧಿಕ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2021 ➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಜಿಲ್ಲೆಯಾದ್ಯಂತ ಮಳೆ ಜೋರಾಗಿದೆ. ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದ ಬಿಡುವು ನೀಡದೆ ಮಳೆ ಸುರಿಯುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯಾದ್ಯಂತ ಸರಾಸರಿ 48.29 ಮಿ.ಮೀ ಮಳೆಯಾಗಿದೆ.

ಶಿವಮೊಗ್ಗ ತಾಲೂಕಿನಲ್ಲಿ 6.80 ಮಿ.ಮೀ, ಭದ್ರಾವತಿ 12.40 ಮಿ.ಮೀ, ತೀರ್ಥಹಳ್ಳಿ 85.60 ಮಿ.ಮೀ, ಸಾಗರ 50.40 ಮಿ.ಮೀ, ಶಿಕಾರಿಪುರ 15.60 ಮಿ.ಮೀ, ಸೊರಬ 20.20 ಮಿ.ಮೀ, ಹೊಸನಗರ 147 ಮಿ.ಮೀ ಮಳೆಯಾಗಿದೆ.

ಹೊಸನಗರ ತಾಲೂಕಿನ ನಿಟ್ಟೂರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 131 ಮಿ.ಮೀ ಮಳೆಯಾಗಿದೆ. ಖೈರಕುಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 147 ಮಿ.ಮೀ, ಸಾಗರದ ಶಂಕರ ಶಾನುಭಾಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 126 ಮಿ.ಮೀ ಮಳೆಯಾಗಿದೆ.

ಜೋರು ಮಳೆಯಾಗುತ್ತಿರುವುದರಿಂದ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆ ಬಿರುಸಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌