ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2021
ಶಿವಮೊಗ್ಗದ ನಂಜಪ್ಪ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆವರಣದಲ್ಲಿ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಲಾಗುತ್ತಿದೆ. ಜುಲೈ 23ರಿಂದ ಕೋವಿಶೀಲ್ಡ್ ಲಸಿಕೆ ನೀಡಲಾಗುತ್ತದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.
18 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗುತ್ತದೆ. ಕುವೆಂಪು ರಸ್ತೆಯಲ್ಲಿರುವ ನಂಜಪ್ಪ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆವರಣದಲ್ಲಿ ಮಧ್ಯಾಹ್ನ 3 ಗಂಟೆವರೆಗೆ ಲಸಿಕೆ ನೀಡಲಾಗುತ್ತದೆ.
ಪ್ರತಿ ಲಸಿಕೆಗೆ 780 ರೂ. ಇರಲಿದೆ. ಆನ್ಲೈನ್ ಬುಕಿಂಗ್ ಅಥವಾ ನೇರವಾಗಿ ಆಸ್ಪತ್ರೆಗೆ ಬಂದು ಲಸಿಕೆ ಪಡೆಯಬಹುದಾಗಿದೆ. ಆಧಾರ್ ಕಾರ್ಡ್ ಕಡ್ಡಯವಾಗಿ ತರಬೇಕು ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
