ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಹಳ್ಳ, ಕೊಳ್ಳಗಳು ತುಂಬಿಕೊಳ್ಳುತ್ತಿವೆ. ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಿಗೂ ಒಳ ಹರಿವು ಹೆಚ್ಚಳವಾಗಿದೆ.
ಮೂರು ಅಡಿ ಏರಿದ ಲಿಂಗನಮಕ್ಕಿ
ಕಳೆದ 24 ಗಂಟೆ ಅವಧಿಯಲ್ಲಿ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಮೂರು ಅಡಿಯಷ್ಟು ಹೆಚ್ಚಳವಾಗಿದೆ. ಗುರುವಾರ ನೀರಿನ ಮಟ್ಟ 1796 ಅಡಿಯಷ್ಟು ಇತ್ತು. ಇವತ್ತು 1799.15 ಅಡಿಗೆ ಏರಿಕೆಯಾಗಿದೆ. ಲಿಂಗನಮಕ್ಕಿಗೆ 73,431 ಕ್ಯೂಸೆಕ್ ಒಳಹರಿವು ಇದೆ.
ಭದ್ರಾ ಡ್ಯಾಂ ನೀರಿನ ಮಟ್ಟ ಹೆಚ್ಚಳ
ಇತ್ತ ಭದ್ರಾ ಜಲಾಶಯದ ನೀರಿನ ಮಟ್ಟವೂ ಮೂರು ಅಡಿಯಷ್ಟು ಹೆಚ್ಚಳವಾಗಿದೆ. ಗುರುವಾರ 167.11 ಅಡಿ ಇತ್ತು. ಇವತ್ತು 171.1 ಅಡಿಗೆ ತಲುಪಿದೆ. 24 ಗಂಟೆ ಅವಧಿಯಲ್ಲಿ 3.99 ಅಡಿಯಷ್ಟು ನೀರಿನ ಸಂಗ್ರಹ ಹೆಚ್ಚಳವಾಗಿದೆ. 39,286 ಕ್ಯೂಸೆಕ್ ಒಳಹರಿವು ಇದೆ.

ತುಂಗಾ ಜಲಾಶಯದ ಹೊರ ಹರಿವು
ತುಂಗಾ ಜಲಾಶಯದಿಂದ ರಾತ್ರಿ ಭಾರಿ ಪ್ರಮಾಣದ ನೀರನ್ನು ಹೊರಗೆ ಬಿಡಲಾಗಿತ್ತು. ಬೆಳಗ್ಗೆ 48,323 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಹಾಗಾಗಿ ಅಷ್ಟೆ ಪ್ರಮಾಣದ ನೀರನ್ನು ಹೊಳಗೆ ಹರಿಸಲಾಗುತ್ತಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






