ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021
ಸಾಗರ ತಾಲೂಕಿನ ಇರುವಕ್ಕಿಯಲ್ಲಿ ಲೋಕಾರ್ಪಣೆ ಮಾಡಲಾದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಬೆಂಗಳೂರಿನಲ್ಲಿರುವ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ವೇದಿಕೆ ಮೂಲಕ ಉದ್ಘಾಟಿಸಿ ಮಾತನಾಡಿದರು.
ಮಲೆನಾಡು, ಕರಾವಳಿ, ಬಯಲುಸೀಮೆಯ ಏಳು ಜಿಲ್ಲೆಗಳ ವ್ಯಾಪ್ತಿಗೆ ಶಿವಮೊಗ್ಗದಲ್ಲಿ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಸ್ಥಾಪಿಸಲಾಗಿದೆ. ಇದು ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ವಿಜ್ಞಾನ ಹೊಂದಿರುವ ರಾಜ್ಯದ ಏಕೈಕ, ಸಮಗ್ರ ಮತ್ತು ವಿಶಿಷ್ಟ ವಿಶ್ವವಿದ್ಯಾಲಯವಾಗಿದೆ. 155 ಕೋಟಿ ರೂ. ವೆಚ್ಚದಲ್ಲಿ ನೂತನ ಕ್ಯಾಂಪಸ್ ನಿರ್ಮಾಣ ಮಾಡಲಾಗಿದೆ. ಈ ವಿಶ್ವವಿದ್ಯಾಲಯಕ್ಕೆ 787 ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂದು ಸಿಎಂ ತಿಳಿಸಿದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






