ಆಯನೂರು ಬಳಿ ಮರಕ್ಕೆ ಹಾಲಿನ ವ್ಯಾನ್ ಡಿಕ್ಕಿ, ಕ್ಲೀನರ್​​​ಗೆ ಗಂಭೀರ ಗಾಯ

ಶಿವಮೊಗ್ಗ ಲೈವ್.ಕಾಂ | AYANUR NEWS | 23 ಆಗಸ್ಟ್ 2021 ➤ ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.

ಹಾಲು ಸರಬರಾಜು ವಾಹನ ಮರಕ್ಕೆ ಡಿಕ್ಕಿಯಾಗಿ, ಕ್ಲೀನರ್​ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಯನೂರು ಸಮೀಪದ ಚೌಡೇಶ್ವರಿ ದೇವಸ್ಥಾನದ ಬಳಿ ರಾತ್ರಿ ಘಟನೆ ಸಂಭವಿಸಿದೆ.

ಸಂತೋಷ್, ಗಾಯಗೊಂಡಿರುವ ಕ್ಲೀನರ್​. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮತ್ತು ಸಾರ್ವಜನಿಕರ ನೆರವಿನಿಂದ  ಕ್ಲೀನರ್​ನನ್ನು ರಕ್ಷಣೆ ಮಾಡಲಾಗಿದೆ. ಸಂತೋಷ್​​ನ ಎರಡು ಕಾಲುಗಳಿಗೆ ಗಂಭೀರ ಗಾಯವಾಗಿದೆ. ಕೂಡಲೆ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಹೇಗಾಯ್ತು ಅಪಘಾತ?

ಹಾಲು ಸರಬರಾಜು ವಾಹನ ಶಿವಮೊಗ್ಗದಿಂದ ಸಾಗರದ ಕಡೆಗೆ ತೆರಳುತಿತ್ತು. ಆಯನೂರುನಿಂದ ಸ್ವಲ್ಪ ಮುಂದೆ ಚೌಡೇಶ್ವರಿ ದೇಗುಲದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಿಂದ ಪಕ್ಕಕ್ಕೆ ಹೋಗಿದೆ.

ADVT JULY NANJAPPA HOSPITAL HOME LAB TESTING

ರಸ್ತೆ ಪಕ್ಕದ ಮರಕ್ಕೆ ಲಾರಿ ಡಿಕ್ಕಿಯಾಗಿದ್ದು, ಮುಂಭಾಗ ನುಜ್ಜುಗುಜ್ಜಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಕ್ಯಾಬಿನ್​ನಿಂದ ಹೊರಗೆ ಬಂದಿದ್ದಾರೆ. ಆದರೆ ಕ್ಲೀನರ್​​ ಸಂತೋಷ್​ ಅವರು ಕ್ಯಾಬಿನ್​​ನಲ್ಲಿ ಸಿಕ್ಕಿಬಿದ್ದಿದ್ದಾರೆ. ವಿಚಾರ ತಿಳಿದು ಶಿವಮೊಗ್ಗದಿಂದ ಕುಂಸಿಗೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಟರ್​​ಗಳನ್ನು ಬಳಸಿಕೊಂಡು ಸಂತೋಷ್​​ ಅವರನ್ನು ರಕ್ಷಣೆ ಮಾಡಿದ್ದಾರೆ.

ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಕೊಡಚಾದ್ರಿ ಟ್ರೆಕ್ಕಿಂಗ್‌: ಹೃದಯಾಘಾತದಿಂದ ಸಿನಿಮಾ ನಿರ್ಮಾಪಕನ ಪುತ್ರ ಸಾವು