ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 23 ಆಗಸ್ಟ್ 2021
ರೋಟರಿ ಇನ್ನರ್ ವ್ಹೀಲ್ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ರಾಜೇಂದ್ರನಗರದ ರೋಟರಿ ಸಭಾಂಗಣದಲ್ಲಿ ಮಹಿಳೆಯರು, ಸಾರ್ವಜನಿಕರಿಗೆ ಸ್ವಯಂ ಉದ್ಯೋಗ ತರಬೇತಿ ಶಿಬಿರ ಆಯೋಜಿಸಲಾಗಿತ್ತು. ಕರಕುಶಲ ವಸ್ತುಗಳು, ಅಲಂಕಾರಿಕಾ ವಸ್ತುಗಳು, ಗೃಹ ಕೈಗಾರಿಕಾ ವಸ್ತುಗಳ ಬಗ್ಗೆ ತಯಾರಿಕೆ ಪ್ರಾತ್ಯಕ್ಷಿಕೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಾರ್ಯಕ್ರಮದ ಮುಖ್ಯ ಅತಿಥಿ, ಉದ್ಯಮಿ ಭಾಗ್ಯ ಸತೀಶ್ ಅವರು ಮಾತನಾಡಿ, ಮಹಿಳೆಯರು ತಯಾರಿಸುವ ಕರಕುಶಲ ವಸ್ತುಗಳಿಗೆ ಮಾರುಕಟ್ಟೆ ಒದಗಿಸುವ ಜೊತೆಯಲ್ಲಿ ಸೂಕ್ತ ಪ್ರೋತ್ಸಾಹದ ಅವಶ್ಯಕತೆ ಇದೆ. ಸ್ವಯಂ ಉದ್ಯೋಗ ತರಬೇತಿ ಪಡೆದು ಬಿಡುವಿನ ವೇಳೆಯಲ್ಲಿ ಮಹಿಳೆಯರು ಅಲಂಕಾರಿಕಾ ವಸ್ತುಗಳು, ಕರಕುಶಲ ವಸ್ತುಗಳು ಮತ್ತು ಗೃಹ ಕೈಗಾರಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇನ್ನರ್ ವ್ಹೀಲ್ ಶಿವಮೊಗ್ಗ ಪೂರ್ವದ ಅಧ್ಯಕ್ಷೆ ಜಯಂತಿ ವಾಲಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಬಿಂದು ವಿಜಯ್ ಕುಮಾರ್, ಶಬರಿ ಕಡಿದಾಳ್, ವೀಣಾ ಪ್ರತಾಪ್, ಉಮಾ ವೆಂಕಟೇಶ್, ವಾಣಿ ಪ್ರವೀಣ್, ಲತಾ ಶಂಕರ್, ಸೀತಾಲಕ್ಷ್ಮಿ, ಮಮತಾ ಸುಧೀಂದ್ರ, ಮಧುರಾ ಮಹೇಶ್, ವೀಣಾ ಸುರೇಶ್, ವಿಜಯಾ ರಾಯ್ಕರ್, ಅನಿತಾ ಸೇರಿದಂತೆ ಹಲವರು ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200