ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಆಗಸ್ಟ್ 2021
ಆರ್.ಟಿ.ಒ. ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಏಜೆಂಟ್’ಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಅಣ್ಣಾ ಹಜಾರೆ ಹೋರಾಟ ಸಮಿತಿ ಆಗ್ರಹಿಸಿದೆ. ಈ ಸಂಬಂಧ ಸಾರಿಗೆ ಇಲಾಖೆಯ ಬೆಂಗಳೂರಿನ ಪ್ರವರ್ತನಾ ದಕ್ಷಿಣ ವಿಭಾಗದ ಅಪರ ಸಾರಿಗೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ನಾನಾ ರೀತಿಯ ಭ್ರಷ್ಟಾಚಾರ ನಡೆಯುತ್ತಿದೆ. ಇಲಾಖೆಯ ಸಿಬ್ಬಂದಿಗಳಿಂದ ಆಗುತ್ತಿರುವ ತೊಂದರೆ ಹಾಗೂ ಬೇಜವಾಬ್ದಾರಿತನದ ಕೆಲಸ ಬಗ್ಗೆ ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಸಮಿತಿ ಮುಖಂಡರು ದೂರಿದರು.
ಸಾರಿಗೆ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಗುರುತಿನ ಕಾರ್ಡ್ ಪ್ರದರ್ಶಿಸಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಬೇಕು. ತಾಂತ್ರಿಕ ಸಮಸ್ಯೆ ಇಲ್ಲದಿದ್ದರೂ ಕಚೇರಿಗೆ ಬಂದಂತಹ ಅರ್ಜಿದಾರರಿಗೆ ಇಲ್ಲ ಸಲ್ಲದ ಸಬೂಬು ಹೇಳಿ ಸತಾಯಿಸುವ ಮೂಲಕ ತೊಂದರೆ ನೀಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದರು.
ಲಂಚ ಕೊಟ್ಟರೆ ಯಾವುದೇ ಕೆಲಸಗಳಿಗೆ ಅಡಚಣೆ ಹಾಗೂ ನಿರ್ಬಂಧವಿರುವುದಿಲ್ಲ. ಆ ಸಂದರ್ಭದಲ್ಲಿ ತಾಂತ್ರಿಕ ತೊಂದರೆ ಕೂಡ ಇರುವುದಿಲ್ಲ. ಲಂಚ ಕೊಟ್ಟಲ್ಲಿ ಅದೇ ದಿನ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಅಣ್ಣಾ ಹಜಾರೆ ಹೋರಾಟ ಸಮಿತಿ ಅಧ್ಯಕ್ಷ ಡಾ.ಬಿ.ಎಂ. ಚಿಕ್ಕಸ್ವಾಮಿ, ಪ್ರಧಾನ ಕಾರ್ಯದರ್ಶಿ ಟಿ.ಎಂ. ಅಶೋಕ್ ಯಾದವ್, ಪ್ರಮುಖರಾದ ಜನಮೇಜಿರಾವ್, ಭೂಪಾಳಂ ಶಿವಸ್ವಾಮಿ, ತಿಮ್ಮಣ್ಣ, ಚಿದಾನಂದ್, ಕಾಮ್ರೆಡ್ ಲಿಂಗಪ್ಪ ಸೇರಿದಂತೆ ಇತರರಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು