ಶಿವಮೊಗ್ಗ ಲೈವ್.ಕಾಂ | BHADRAVATHI NEWS | 26 ಆಗಸ್ಟ್ 2021
ಕೆಲಸ ಮುಗಿಸಿಕೊಂಡು ನಡೆದುಕೊಂಡು ಮನೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಿಂದಿನಿಂದ ವಾಹನವೊಂದು ಗುದ್ದಿದೆ. ಅಪಘಾತದಲ್ಲಿ ಪಾದಚಾರಿಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭದ್ರಾವತಿ ತಾಲೂಕು ಕಾರೇಹಳ್ಳಿ ಸರ್ಕಲ್’ನಲ್ಲಿ ಘಟನೆ ಸಂಭವಿಸಿದೆ. ಕಾರೇಹಳ್ಳಿ ಗ್ರಾಮದಲ್ಲಿರುವ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಯೇಸುದಾಸ್ ಅವರಿಗೆ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾಲು, ತಲೆಗೆ ಗಾಯವಾಗಿದೆ.
ವಾಹನ ನಿಲ್ಲಿಸದೆ ಪರಾರಿ
ಯೇಸುದಾಸ್ ಅವರಿಗೆ ಗುದ್ದಿದ ವಾಹನ ಸ್ಥಳದಿಂದ ಪಾರಾರಿಯಾಗಿದೆ. ವಾಹನ ಚಾಲಕ ಯೇಸುದಾಸ್ ಅವರ ಪರಿಸ್ಥಿತಿಯನ್ನು ಗಮನಿಸಿದೆ, ಅವರು ರಸ್ತೆ ಮೇಲೆ ಬಿದ್ದಿದ್ದರೂ ಎಸ್ಕೇಪ್ ಆಗಿದ್ದಾರೆ.
ಇದನ್ನೂ ಓದಿ | ಬಾರಂದೂರು ಬಳಿ ಭೀಕರ ಅಪಘಾತ, ಸೀಟ್’ನಲ್ಲೇ ಸಿಕ್ಕಿಬಿದ್ದು ಚಾಲಕ ಸಾವು
ಪೇಪರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಾಹನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು