ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021
ಬೀಗ ಹಾಕಿದ್ದ ಮನೆಯೊಂದರ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಡಿದು ವಿಚಾರಣೆ ನಡೆಸಿದ ಪೊಲೀಸರು, ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ನಗರದ ವಿನೋಬನಗರ ಠಾಣೆ ವ್ಯಾಪ್ತಿಯ ರತ್ನಾಕರ ಲೇಔಟ್’ನಲ್ಲಿ ಘಟನೆ ಸಂಭವಿಸಿದೆ. ಬೀಗಿ ಹಾಕಿದ್ದ ಮನೆಯ ಬಳಿಗೆ ನಿಂತಿದ್ದ ವ್ಯಕ್ತಿಯೊಬ್ಬ, ಗಸ್ತು ಪೊಲೀಸರನ್ನು ಕಂಡು ಓಡಲು ಯತ್ನಿದ್ದಾನೆ. ರಾತ್ರಿ 8 ಗಂಟೆಗೆ ಹೊತ್ತಿಗೆ ಈ ಘಟನೆ ಸಂಭವಿಸಿದೆ.
ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿಯ ಬೆನ್ನಟ್ಟಿ ಹಿಡಿದ ಪೊಲೀಸರು, ಆತನ ವಿಚಾರಣೆ ನಡೆಸಿದ್ದಾರೆ. ಆತನ ಹೆಸರು ನವೀನ್ ಎಂದು ತಿಳಿದು ಬಂದಿದೆ. ರತ್ನಾಕರ ಲೇಔಟ್’ನಲ್ಲಿ ಓಡಾಡಲು ಕಾರಣವೇನು, ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ್ದೇಕೆ ಎಂದು ಪ್ರಶ್ನಿಸಿದಾಗ ಸಮರ್ಪಕ ಉತ್ತರ ನೀಡಿಲ್ಲ. ಹಾಗಾಗಿ ಈತ ಕಳ್ಳತನಕ್ಕೆ ಪ್ರಯತ್ನಿಸುತ್ತಿರುವ ಕುರಿತು ಶಂಕೆ ವ್ಯಕ್ತವಾಗಿದ್ದು, ನವೀನ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200