ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021
ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಖದೀಮರು ಕಳುವು ಮಾಡಿದ್ದಾರೆ. ಸದ್ದಾಗದಂತೆ ಕಾರನ್ನು ಕದ್ದು ಪರಾರಿಯಾಗಿದ್ದಾರೆ. ಈ ಸಂಬಂಧ ಮಾಲೀಕರು ದೂರು ನೀಡಿದ್ದಾರೆ.
ಶಿವಮೊಗ್ಗ ನಗರದ ಗಾರ್ಡನ್ ಏರಿಯಾದ 2ನೇ ಅಡ್ಡರಸ್ತೆಯಲ್ಲಿ ಘಟನೆ ಸಂಭವಿಸಿದೆ. ಗೋವಿಂದ ಎಂಬುವವರಿಗೆ ಸೇರಿದ ಮಾರುತಿ ಸುಜುಕಿ ವಿಟರಾ ಬ್ರಿಜಾ ಕಾರು ಕಳುವಾಗಿದೆ. ಇದರ ಅಂದಾಜು ಮೌಲ್ಯ 4.90 ಲಕ್ಷ ರೂ. ಎಂದು ದೂರಿನಲ್ಲಿ ದಾಖಲಿಸಲಾಗಿದೆ.
ಹೇಗಾಯ್ತು ಘಟನೆ?
ಗಾರ್ಡನ್ ಏರಿಯಾದಲ್ಲಿ ಗೋವಿಂದ ಅವರಿಗೆ ಸೇರಿದ ಕಟ್ಟಡವಿವೆ. ಪ್ರತಿ ರಾತ್ರಿ ಕಟ್ಟಡದ ಮುಂದೆ ಕಾರು ನಿಲ್ಲಿಸುತ್ತಿದ್ದರು. ಆಗಸ್ಟ್ 28ರಂದು ರಾತ್ರಿ ಕಾರು ನಿಲ್ಲಿಸಿ, ಕಟ್ಟಡದಲ್ಲಿರುವ ತಮ್ಮ ಮನೆಗೆ ಹೋಗಿದ್ದಾರೆ. ಬೆಳಗ್ಗೆ ಬಂದು ನೋಡಿದಾಗ ಕಾರು ಕಣ್ಮರೆಯಾಗಿದೆ. ಗಾಬರಿಯಾದ ಗೋವಿಂದ ಅವರು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














