ಶಿವಮೊಗ್ಗ ಲೈವ್.ಕಾಂ |SHIMOGA NEWS | 4 ಸೆಪ್ಟೆಂಬರ್ 2021
ಅಡುಗೆ ಅನಿಲ ಸಿಲಿಂಡರ್ ಬಲೆ, ಪೆಟ್ರೋಲ್ ಮತ್ತು ಡಿಸೇಲ್ ದರ ಹೆಚ್ಚಳ ವಿರೋಧಿಸಿ ಶಿವಮೊಗ್ಗದಲ್ಲಿ ನಡುರಸ್ತೆಯಲ್ಲೇ ಒಲೆ ಹಚ್ಚಿ, ಅಡುಗೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಸಿದರು.
ಒಲೆ ಹಚ್ಚಿ ಅಡುಗೆ
ಸರ್ಕಲ್ ಮಧ್ಯದಲ್ಲೇ ಸೌದೆ ಒಲೆ ನಿರ್ಮಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಅಡುಗೆ ಮಾಡುವಂತೆ ಅಣಕು ಪ್ರದರ್ಶನ ಮಾಡಿದರು. ಇದೇ ವೇಳೆ ಕೇಂದ್ರ ಸರ್ಕಾರ ದಿನೇ ದಿನೇ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಆಕ್ರೋಶ ವ್ಯಕ್ತಪಿಸಿದರು.
ಸರ್ಕಾರವನ್ನು ವಜಾಗೊಳಿಸಬೇಕು
ಪ್ರತಿಭಟನೆಯಲ್ಲಿ ಮಾತನಾಡಿದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ದಿನೇ ದಿನೇ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿ, ಕೇಂದ್ರ ಸರ್ಕಾರ ಜನರಿಗೆ ಬರೆ ಹಾಕುತ್ತಿದೆ. ಭಾರತೀಯರು ಬದುಕಲು ಕಷ್ಟಪಡುವಂತಹ ಸ್ಥಿತಿ ಇದೆ. ರಾಷ್ಟ್ರಪತಿಗಳು ಕೇಂದ್ರ ಸರ್ಕಾರವನ್ನು ವಜಾಗೊಲಿಸಬೇಕು ಎಂದು ಆಗ್ರಹಿಸಿದರು.
ಮೋದಿ ಫೋಟೊಗೆ ಬೆಂಕಿ
ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಫೋಟೊಗೆ ಬೆಂಕಿ ಹಚ್ಚಿದರು. ಕೇಂದ್ರ ಸರ್ಕಾರ ಕೂಡಲೆ ತೈಲೋತ್ಪನ್ನಗಳ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು. ಇನ್ನು, ರಸ್ತೆಯಲ್ಲಿ ಬೆಂಕಿ ಹಚ್ಚಿದ್ದಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200