ಶಿವಮೊಗ್ಗ ಲೈವ್.ಕಾಂ | SAGARA NEWS | 7 ಸೆಪ್ಟೆಂಬರ್ 2021
ವಿದ್ಯುತ್ ಶಾಕ್’ಗೆ ಒಳಗಾಗಿ ಲೈನ್ ಮ್ಯಾನ್ ಒಬ್ಬರು ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು, ಗಾಯಗೊಂಡಿದ್ದಾರೆ. ಬಿಎಸ್ಎನ್ಎಲ್ ಟವರ್ ಆಪರೇಟರ್ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹುಲಿದೇವರಬನದ ರವಿಕಾಂತ್ (24) ಗಾಯಗೊಂಡ ಲೈನ್ ಮ್ಯಾನ್. ಸಾಗರ ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.
ಏನಿದು ಘಟನೆ? ಶಾಕ್’ಗೆ ಕಾರಣವೇನು?
ಸಾಗರದ ಆವಿನಹಳ್ಳಿ ಫೀಡರ್’ನಲ್ಲಿ ನಿರ್ವಹಣೆ ಇರುವುದರಿಂದ ವಿದ್ಯುತ್ ಕಡಿತಗೊಳಿಸುವುದಾಗಿ ಮೆಸ್ಕಾಂ ಪ್ರಕಟಣೆ ಹೊರಡಿಸಿತ್ತು. ಗಿಣಿವಾರ ಗ್ರಾಮದ ಕೊಡಚಾದ್ರಿ ಶಾಲೆಯ ವಿದ್ಯುತ್ ಲೈನ್ ನಿರ್ವಹಣೆ ಮಾಡುತ್ತಿದ್ದಾಗ ರವಿಕಾಂತ್ ಅವರಿಗೆ ವಿದ್ಯತ್ ಶಾಕ್ ಆಗಿದೆ. 15 ಅಡಿಯಿಂದ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ.
ಬಿಎಸ್ಎನ್ಎಲ್ ಟವರ್ ನಿರ್ವಾಹಕ ಕಾರಣ
ಮೆಸ್ಕಾಂ ಲೈನ್ ಮ್ಯಾನ್ ವಿದ್ಯುತ್ ಶಾಕ್’ಗೆ ಒಳಗಾಗಲು ಬಿಎಸ್ಎನ್ಎಲ್ ಟವರ್ ನಿರ್ವಹಣೆ ಮಾಡುತ್ತಿದ್ದವರೆ ಕಾರಣ ಎಂದು ಆರೋಪಿಸಲಾಗಿದೆ. ಟವರ್’ನ ಜನರೇಟರನ್ನು ನಿರ್ವಾಹಕ ದಿಢೀರನೆ ಚಾಲನೆ ಮಾಡಿದ್ದಾನೆ. ಇದರಿಂದ ವಿದ್ಯುತ್ ರಿಟರ್ನ್ ಆಗಿದೆ ಎಂದು ಆರೋಪಿಸಲಾಗಿದೆ. ಹಾಗಾಗಿ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ರವಿಕಾಂತ್’ಗೆ ಶಾಕ್ ಹೊಡೆದಿದೆ ಎಂದು ತಿಳಿದು ಬಂದಿದೆ.
ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200