ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಸೆಪ್ಟೆಂಬರ್ 2021
ಬೈಕುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗದ ವಾಜಪೇಯಿ ಬಡಾವಣೆಯ ತೂಕ ಮತ್ತು ಅಳತೆ ಮಾಪಕ ಇಲಾಖೆ ಬಳಿ ಘಟನೆ ಸಂಭವಿಸಿದೆ. ಮುಖ್ಯ ರಸ್ತೆಯಿಂದ ಪ್ರೊ. ಬಿ.ಕೃಷ್ಣಪ್ಪ ಸ್ಮಾರಕ ಹಾಸ್ಟೆಲ್ ಕಡೆಗೆ ತೆರಳುತ್ತಿದ್ದಾಗ ಅಪಘಾತವಾಗಿದೆ.
ವಿದ್ಯಾರ್ಥಿಗಳು ಶಿವಮೊಗ್ಗದಿಂದ ಹಾಸ್ಟೆಲ್ ಕಡೆಗೆ ಸ್ಪೆಂಡರ್ ಬೈಕಿನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಸಿಟಿ 100 ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಅಭಿಷೇಕ್, ಮಧುಸೂದನ್, ಸಚಿನ್ ಲಂಬಾಣಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

About The Editor
ನಿತಿನ್ ಆರ್.ಕೈದೊಟ್ಲು





