ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021
ಶಿವಮೊಗ್ಗ ಏರ್ ಪೋರ್ಟ್’ನಿಂದ ಐದು ಮಾರ್ಗಗಳಲ್ಲಿ ವಿಮಾನ ಹಾರಾಟ ನಡೆಸಲು ನಿರ್ಧರಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಅಂತಿಮ ಪ್ರಸ್ತಾವನೆ ಸಲ್ಲಿಸುವ ಕುರಿತು ಸಿದ್ಧತೆ ನಡೆಯುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸೆಪ್ಟೆಂಬರ್ 13ರೊಳಗೆ ಅಂತಿಮ ಪ್ರಸ್ತಾವನೆ ಸಲ್ಲಿಸಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗದ ಸಾಗರ ರಸ್ತೆ ಕೈಗಾರಿಕಾ ವಸಾಹತು ಪ್ರದೇಶದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗದಿಂದ ಐದು ಮಾರ್ಗದಲ್ಲಿ ವಿಮಾನ ಹಾರಟಕ್ಕೆ ನಿರ್ಧರಿಸಲಾಗಿದೆ ಎಂದರು.
ಯಾವೆಲ್ಲಾ ಮಾರ್ಗದಲ್ಲಿ ವಿಮಾನ ಹಾರಾಟ?
ಶಿವಮೊಗ್ಗದಿಂದ ಬೆಂಗಳೂರು, ಚೆನ್ನೈ, ಮುಂಬೈ ಸೇರಿ ಐದು ಮಾರ್ಗಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಧರಿಸಲಾಗಿದೆ. ಉಡಾನ್ ಯೋಜನೆ ಅಡಿ ಈ ಮಾರ್ಗಗಳನ್ನು ಸೂಚಿಸಲಾಗಿದೆ. ಜಿಲ್ಲೆಯ ಪ್ರವಾಸೋದ್ಯಮ ಮತ್ತು ಕೈಗಾರಿಕೋದ್ಯಮ ಅಭಿವೃದ್ಧಿಯನ್ನು ಗಮನದಲ್ಲಿ ಇರಿಸಿಕೊಂಡು ಈ ಮಾರ್ಗಗಳನ್ನು ನಿರ್ಧರಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200