ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021
ಒಂದರಿಂದ ಐದನೇ ತರಗತಿವರೆಗಿನ ಶಾಲೆ ಆರಂಭಿಸುವ ಕುರಿತು ತಾಂತ್ರಿಕ ಸಮಿತಿ ಸಭೆಯ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ. ಒಂದು ವೇಳೆ ಕರೋನ ಹೆಚ್ಚಳವಾದರೆ ಈಗ ಆರಂಭಿಸಲಾಗಿರುವ ತರಗತಿಗಳನ್ನು ಸ್ಥಗಿತಗೊಳಿಸುವ ಅಧಿಕಾರ ಸರ್ಕಾರದ ಬಳಿ ಇದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ನಾಗೇಶ್, ಈಗಾಗಲೆ ಆರರಿಂದ ಎಂಟನೆ ತರಗತಿಗಳು ಆರಂಭವಾಗಿವೆ. ಶಿಕ್ಷಕರು ಉತ್ತಮವಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಅದೇ ರೀತಿ ಒಂದರಿಂದ ಐದನೇ ತರಗತಿವರೆಗೆ ಶಾಲೆ ಆರಂಭಿಸುವ ಕುರಿತು ಚಿಂತನೆ ಇದೆ. ಆದರೆ ತಾಂತ್ರಿಕ ಸಮಿತಿ ಸಭೆ ಅನುಮತಿ ನೀಡಿದ ಬಳಿಕ ಆರಂಭಿಸುತ್ತೇವೆ ಎಂದರು.
ಪಠ್ಯ ಕಡಿತಗೊಳಿಸಿದರೆ ವಿದ್ಯಾರ್ಥಿಗಳಿಗೆ ತೊಂದರೆ
ಪಠ್ಯ ಕಡಿತಗೊಳಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ. ಈಗಾಗಲೇ ಮಕ್ಕಳು ಒಂದೂವರೆ ವರ್ಷ ಶಾಲೆಯಿಂದ ದೂರ ಉಳಿದಿದ್ದಾರೆ. ಈಗ ಪಠ್ಯ ಕಡಿತಗೊಳಿಸಿದರೆ ಮಕ್ಕಳ ಕಲಿಕೆಗೆ ತೊಂದರೆಯಾಗಲಿದೆ. ಬ್ರಿಡ್ಜ್ ಕೋರ್ಸ್ ಮೂಲಕ ಮಕ್ಕಳಿಗೆ ಪಾಠ ಮಾಡುವ ಯೋಚನೆ ಇದೆ. ಈ ಬಗ್ಗೆ ಯಾವುದೆ ಅಂತಿಮ ನಿರ್ಣಯ ಕೈಗೊಂಡಿಲ್ಲ. ಶಿಕ್ಷಕರ ರಜೆ ಕಡಿತಗೊಳಿಸಿ ಪಠ್ಯ ಪೂರ್ಣ ಮಾಡುವ ಯೋಚನೆಯೂ ಇದೆ. ಆದರೆ ಈ ಬಗ್ಗೆ ಯಾವುದೆ ನಿರ್ಧಾರವಾಗಿಲ್ಲ ಎಂದರು.
ಕರೋನ ಹೆಚ್ಚಾದರೆ ಶಾಲೆ ಸ್ಥಗಿತ
ಕೇರಳದಲ್ಲಿ ಕರೋನ ಹೆಚ್ಚಳವಾಗುತ್ತಿದೆ. ಮಂಗಳೂರು, ಉಡುಪಿಯಲ್ಲಿ ಪ್ರಕರಣಗಳು ತಗ್ಗುತ್ತಿವೆ. ಹಾಗಾಗಿ ಶಾಲೆಗಳನ್ನು ಆರಂಭಿಸಲಾಗಿದೆ. ಒಂದು ವೇಳೆ ಕೋವಿಡ್ ಪ್ರಕರಣಗಳು ಏರಿಕೆಯಾದರೆ ತಕ್ಷಣ ಶಾಲೆಗಳನ್ನು ನಿಲ್ಲಿಸುವ ಅವಕಾಶವು ಸರ್ಕಾರಕ್ಕಿದೆ ಎಂದು ಸ್ಪಷ್ಟಪಡಿಸಿದರು.
ತಡೆಯಾಜ್ಞೆ ತೆರವುಗೊಳಿಸುವ ಪ್ರಯತ್ನ
ಶಿಕ್ಷಕರ ವರ್ಗಾವಣೆ ವಿಚಾರವಾಗಿ ಕೆಲವು ಕೋರ್ಟ್ ಮೊರೆ ಹೋಗಿದ್ದು, ತಡೆಯಾಜ್ಞೆ ತರುತ್ತಿದ್ದಾರೆ. ಹಾಗಾಗಿ ವರ್ಗಾವಣೆ ಪ್ರಕ್ರಿಯೆ ಸ್ಥಗಿತವಾಗಿದೆ. ಕಳೆದ ಮೂರು ವರ್ಷದಿಂದ ವರ್ಗಾವಣೆಯಾಗಿಲ್ಲ. ಕೋರ್ಟ್’ನಲ್ಲಿ ತಡೆಯಾಜ್ಞೆ ತೆರವುಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಒಂದು ವೇಳೆ ತಡೆಯಾಜ್ಞೆ ತೆರವಾಗದಿದ್ದರೆ ಉಳಿದ ವರ್ಗಕ್ಕೆ ವರ್ಗಾವಣೆ ಪ್ರಕ್ರಿಯೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ನಾಗೇಶ್ ತಿಳಿಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200