ಕಾರಿನಲ್ಲಿ ಬಂದು ಪ್ರತಿದಿನ ಗಾಂಜಾ ಮಾರುತ್ತಿದ್ದವರ ಮೇಲೆ ದಾಳಿ, ಪೇಂಟರ್, ಪ್ಲಂಬರ್’ಗಳು ಅರೆಸ್ಟ್, ನಾಲ್ವರು ಎಸ್ಕೇಪ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021

ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇವರಿಂದ ಭಾರಿ ಮೊತ್ತದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಘಟನೆಯಲ್ಲಿ ಮೂವರು ಅರೆಸ್ಟ್ ಆಗಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ.

ಶಿವಮೊಗ್ಗದ ಕಲ್ಲೂರು ಗ್ರಾಮದ ಚಾನಲ್ ಬಳಿ ಘಟನೆ ಸಂಭವಿಸಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತುಂಗಾ ನಗರ ಠಾಣೆ ಗಾಂಜಾ ಮಾರಾಟಗಾರರನ್ನು ಬಂಧಿಸಿದ್ದಾರೆ.

ಪ್ರತಿದಿನ ನಡೆಯುತಿತ್ತು ಗಾಂಜಾ ಮಾರಾಟ

ಕಲ್ಲೂರು ಗ್ರಾಮದ ಚಾನಲ್ ಬಳಿ ಗಾಂಜಾ ಮಾರಾಟಗಾರರು ಪ್ರತಿದಿನ ಬರುತ್ತಿದ್ದರು. ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದೆ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ADVT JULY NANJAPPA HOSPITAL HOME LAB TESTING

ಪೇಂಟರ್, ಪ್ಲಂಬರ್ ಮತ್ತು ಎಸ್ಕೇಪ್ ಆದವರು

ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದವರು ಊರುಗಡೂರು, ಸೂಳೆಬೈಲಿನವರು ಎಂದು ತಿಳಿದು ಬಂದಿದೆ. ಪ್ಲಂಬರ್ ಕೆಲಸ ಮಾಡುತ್ತಿದ್ದ ಶೇಖ್ ಅಹಮದ್, ಮೊಹಮದ್ ಮುಸ್ತಫಾ, ಪೇಂಟರ್ ಅಲ್ಲಾಭಕ್ಷಿ ಬಂಧಿತರು. ಪೊಲೀಸರು ದಾಳಿ ನಡೆಸುತ್ತಿದ್ದಂತೆ ರಾಹಿಲ್, ಕುರಂ, ತಾಸೀರ್, ಮಾಡ್ಲರ್ ಶಾರೂ ಎಸ್ಕೇಪ್ ಆಗಿದ್ದಾರೆ. ಇವರ ಪತ್ತೆಗೆ ಕಾರ್ಯಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.

ಕೆಜಿಗಟ್ಟಲೆ ಗಾಂಜಾ, ಕಾರು ಸೀಜ್

ಬಂಧಿತರಿಂದ ಪೊಲೀಸರು ಎರಡು ಕೆಜಿ 120 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯದ ಸುಮಾರು 80 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಘಟನೆಗೆ ಬಳಕೆ ಮಾಡಿಕೊಂಡಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ.

ಡಿವೈಎಸ್ಪಿ ಪ್ರಶಾಂತ್ ಮುನ್ನೋಳಿ ಮಾರ್ಗದರ್ಶನದಲ್ಲಿ, ಇನ್ಸ್ ಪೆಕ್ಟರ್ ದೀಪಕ್, ಸಿಬ್ಬಂದಿಗಳಾದ ಅರುಣ್ ಕುಮಾರ್, ಸಂದೀಪ್, ಕಾಂತರಾಜು, ರಾಜೇಗೌಡ ಪಾಟೀಲ್ ಅವರು ದಾಳಿಯಲ್ಲಿ ಭಾಗವಹಿಸಿದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 12, 2021

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment