ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಮನೆ ಮುಂದೆ ನಿಲ್ಲಿಸಿದ್ದ ಬೈಕನ್ನೇ ಕಳ್ಳರು ಕದ್ದೊಯ್ದಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಸಿಬ್ಬಂದಿ ರುಕ್ಮುದ್ದಿನ್ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ರುಕ್ಮುದ್ದಿನ್ ಅವರು ಅಶೋಕನಗರದಲ್ಲಿರುವ ತಮ್ಮ ಬಾಡಿಗೆ ಮನೆ ಮುಂದೆ ಬೈಕ್ ನಿಲ್ಲಿಸಿ, ಊರಿಗೆ ತೆರಳಿದ್ದರು. ಆಗ ಕಳ್ಳರು ಬೈಕ್ ಕದ್ದೊಯ್ದಿದ್ದಾರೆ.
ಬೈಕ್ ನಾಪತ್ತೆ ಆಗಿರುವ ಕುರಿತು ಅವರ ಮನೆ ಮಾಲೀಕರು ಗಮನಿಸಿದ್ದರು. ಈ ಬಗ್ಗೆ ರುಕ್ಮುದ್ದಿನ್ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಕೂಡಲೆ ಊರಿನಿಂದ ಹಿಂತಿರುಗಿದ್ದ ಅವರು ಪರಿಶೀಲಿಸಿದ್ದರು. ಆಗಸ್ಟ್ 19ರ ರಾತ್ರಿ ಘಟನೆ ಸಂಭವಿಸಿದ್ದು, ಎಲ್ಲಡೆ ಬೈಕಿಗಾಗಿ ಹುಡುಕಿದ ರುಕ್ಮುದ್ದಿನ್ ದೊಡ್ಡಪೇಟೆ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






