ಜಲಾಶಯಗಳಿಗೆ ಒಳಹರಿವು ಹೆಚ್ಚಳ, ಭರ್ತಿಯಾಗುವತ್ತ ಲಿಂಗನಮಕ್ಕಿ, ಯಾವ್ಯಾವ ಡ್ಯಾಮ್’ಗೆ ಎಷ್ಟಿದೆ ಒಳ, ಹೊರ ಹರಿವು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟೆಂಬರ್ 2021

ವಾಯುಭಾರ ಕುಸಿತದಿಂದಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ ಜಿಲ್ಲೆಯ ಜಲಾಶಯಗಳ ಒಳ ಹರಿವು ಪ್ರಮಾಣದಲ್ಲಿ ಏರಿಕೆಯಾಗಿದೆ. ಲಿಂಗನಮಕ್ಕಿ ಜಲಾಶಯ ಸಂಪೂರ್ಣ ಭರ್ತಿಯಾಗುವ ಹಂತಕ್ಕೆ ತಲುಪಿದೆ.

ಅರ್ಧ ಮುಳುಗಿದ ಮಂಟಪ

ಹಿನ್ನೀರು ಭಾಗದಲ್ಲಿ ಮಳೆ ಹೆಚ್ಚಳವಾದ ಹಿನ್ನೆಲೆ ತುಂಗಾ ಜಲಾಶಯದ ಒಳಹರಿವು ಮತ್ತೆ ಏರಿಕೆಯಾಗಿದೆ. ಜಲಾಶಯ ಈಗಾಗಲೇ ಸಂಪೂರ್ಣ ಭರ್ತಿಯಾಗಿದೆ. ಹಾಗಾಗಿ ಒಳಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಜಲಾಶಯಕ್ಕೆ 20,396 ಕ್ಯೂಸೆಕ್ ನೀರು ಒಳಹರಿವು ಇದೆ. ಅಷ್ಟೆ ಪ್ರಮಾಣದ ನೀರು ಹೊರಗೆ ಹರಿಸಲಾಗುತ್ತಿದೆ.

NH nephrolody%2Bad %2Bkannada 10

ಜಲಾಶಯದ ಹೊರ ಹರಿವು ಹೆಚ್ಚಳವಾದ ಹಿನ್ನೆಲೆ ತುಂಗಾ ನದಿ ಮತ್ತೆ ಮೈದುಂಬಿ ಹರಿಯುತ್ತಿದೆ. ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಅರ್ಧ ಮುಳುಗಿದೆ.

ಭದ್ರಾ ಜಲಾಶಯಕ್ಕೂ ಒಳಹರಿವು ಏರಿಕೆ

ಇನ್ನು, ಭದ್ರಾ ಜಲಾಶಯಕ್ಕೂ ಒಳಹರಿವು ಹೆಚ್ಚಳವಾಗಿದೆ. ಜಲಾಶಯ ಭರ್ತಿಯಾಗಿರುವುದರಿಂದ ನೀರು ಹೊರಗೆ ಬಿಡುತ್ತಿರುವುದನ್ನು ಮುಂದುವರೆಸಲಾಗಿದೆ. ಜಲಾಶಯಕ್ಕೆ 7781 ಕ್ಯೂಸೆಕ್ ಒಳಹರಿವು ದಾಖಲಾಗಿದೆ. 6867 ಕ್ಯೂಸೆಕ್ ಹೊರ ಹರಿವು ಇದೆ.

ಭರ್ತಿಯಾಗುವತ್ತ ಲಿಂಗನಮಕ್ಕಿ ಡ್ಯಾಂ

ಲಿಂಗನಮಕ್ಕಿ ಜಲಾಶಯ ಸಂಪೂರ್ಣ ಭರ್ತಿಯಾಗುವ ಹಂತಕ್ಕೆ ತಲುಪಿದೆ. ಇನ್ನು ಮೂರು ಮುಕ್ಕಾಲು ಅಡಿ ನೀರು ಬಂದರೆ ಜಲಾಶಯ ಭರ್ತಿಯಾಗಲಿದೆ. ಲಿಂಗನಮಕ್ಕಿ ಜಲಾಶಯ 1819 ಅಡಿ ಇದೆ. 1815.25 ಅಡಿಯಷ್ಟು ನೀರಿದೆ. ಜಲಾಶಯದ ಒಳ ಹರಿವು 33258 ಕ್ಯೂಸೆಕ್ ಇದೆ.

ಮಳೆ ಪ್ರಮಾಣ ಹೆಚ್ಚಳವಾದರೆ ಜಲಾಶಯದ ಒಳಹರಿವು ಮತ್ತಷ್ಟು ಏರಿಕೆಯಾಗಲಿದೆ. ಲಿಂಗನಮಕ್ಕಿ ಹೊರತು ಉಳಿದೆ ಜಲಾಶಯಗಳಿಂದ ಹೊರ ಹರಿವು ಇದೆ.

tunga1

tunga2

tunga3

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 13, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment