ಶಿವಮೊಗ್ಗದಲ್ಲಿ ತಂದೆ, ಮಗನ ಮಧ್ಯೆ ಗಲಾಟೆ, ಕೋಪದಲ್ಲಿ ತಂದೆ ತಲೆಗೆ ಹೊಡೆದು ಕೊಲೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟೆಂಬರ್ 2021

ತಂದೆಯೊಂದಿಗೆ ಜಗಳವಾಡಿದ ಮಗ, ತೆಂಗಿನ ರಟ್ಟೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡೇನಕೊಪ್ಪದ ಕುಮಾರ ನಾಯ್ಕ (55) ಮೃತ ವ್ಯಕ್ತಿ. ಮನೆಯಲ್ಲಿ ತನ್ನ ಮಗ ಮಧು (28) ಜೊತೆ ಜಗಳವಾಡಿದ್ದಾರೆ. ಈ ವೇಳೆ ಘಟನೆ ಸಂಭವಿಸಿದೆ.

ಮನೆಯಲ್ಲಿದ್ದ ದಿನಸಿ ವಸ್ತುಗಳನ್ನು ಮಾರಾಟ ಮಾಡಿ, ಕುಡಿದು ಬರುತ್ತಾರೆ ಅನ್ನುವ ವಿಚಾರಕ್ಕೆ ತಂದೆ, ಮಗನ ಜೊತೆಗೆ ಗಲಾಟೆಯಾಗಿದೆ. ಕೋಪದಲ್ಲಿ ತೆಂಗಿನ ರಟ್ಟೆಯಿಂದ ಹಲ್ಲೆ ನಡೆಸಿದ್ದಾನೆ. ತಲೆಗೆ ಗಂಭೀರ ಗಾಯವಾಗಿದ್ದು ಕುಮಾರನಾಯ್ಕ ಮೃತಪಟ್ಟಿದ್ದಾರೆ.

ತುಂಗಾ ನಗರ ಪೊಲೀಸರು ಮಧುನನ್ನು ವಶಕ್ಕೆ ಪಡೆದು, ತನಿಖೆ ಮುಂದುವರೆಸಿದ್ದಾರೆ.

LifeSpring%2BKan%2B02

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 13, 2021

Leave a Comment