ಬೈಕ್’ನಲ್ಲಿ ಬಂದು ಮೊಬೈಲ್ ಕಿತ್ತುಕೊಂಡು ಪರಾರಿಯಾದ ಖದೀಮರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021

ರಸ್ತೆ ಬದಿ ಮೊಬೈಲ್ ಫೋನ್’ನಲ್ಲಿ ಮಾತನಾಡುತ್ತಿದ್ದ ವೇಳೆ ಬೈಕ್’ನಲ್ಲಿ ಬಂದ ಇಬ್ಬರು ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದ ಗೋಪಾಳದ ದ್ರೌಪದಮ್ಮ ಸರ್ಕಲ್ ಬಳಿಕ ಘಟನೆ ಸಂಭವಿಸಿದೆ. ಪ್ರಭಾಕರ್ ಎಂಬುವವರು ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಮೊಬೈಲ್ ರಿಂಗಾಗಿದೆ. ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ ಫೋನ್’ನಲ್ಲಿ ಮಾತನಾಡುತ್ತಿದ್ದರು.

ಹಿಂದಿನಿಂದ ಬೈಕ್’ನಲ್ಲಿ ಬಂದ ಇಬ್ಬರು ಪ್ರಭಾಕರ್ ಅವರ ಮೊಬೈಲ್ ಕಿತ್ತುಕೊಂಡು ಆಲ್ಕೊಳಕ್ಕೆ ಹೋಗುವ ಡಬಲ್ ರಸ್ತೆಯಲ್ಲಿ ತೆರಳಿದ್ದಾರೆ. ಈ ಸಂಬಂಧ ಪ್ರಭಾಕರ್ ಅವರು ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ.

LifeSpring%2BKan%2B02

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment