ಹಾಸ್ಟೆಲ್’ನಲ್ಲಿ ದಿಢೀರ್ ಬೆಂಕಿ, ಆತಂಕದಿಂದ ಹೊರಗೆ ಓಡಿ ಬಂದ ವಿದ್ಯಾರ್ಥಿನಿಯರು

Published On : ಸೆಪ್ಟೆಂಬರ್ 17, 2021

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021

ವಿದ್ಯಾರ್ಥಿನಿಯರ ಹಾಸ್ಟೆಲ್’ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಬಾಪೂಜಿನಗರದಲ್ಲಿರುವ ಪ್ರೊ. ಬಿ.ಕೃಷ್ಣಪ್ಪ ಸ್ಮಾರಕ ವೃತ್ತಿಪರ ವಿದ್ಯಾರ್ಥಿನಿಯರ ಹಾಸ್ಟೆಲ್’ನಲ್ಲಿ ರಾತ್ರಿ ಘಟನೆ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದಾಗಿ ಬೆಂಕಿ ಹೊತ್ತುಕೊಂಡಿರುವ ಶಂಕೆ ಇದೆ. ಅಡುಗೆ ಮನೆ ಸಮೀಪ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಹೊತ್ತುಕೊಂಡು ವಿದ್ಯುತ್ ಕಡಿತವಾಗಿದೆ. ಗಾಬರಿಯಾದ ವಿದ್ಯಾರ್ಥಿನಿಯರು ಹಾಸ್ಟೆಲ್’ನಿಂದೆ ಹೊರಗೆ ಓಡಿ ಬಂದಿದ್ದರು. ಕೂಡಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಘಟನೆಯಿಂದಾಗಿ ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.

NH nephrolody%2Bad %2Bkannada 10

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಸೆಪ್ಟೆಂಬರ್ 17, 2021

Leave a Comment