ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ, ಅದ್ಧೂರಿ ಮೆರವಣಿಗೆ, ಹೇಗಿತ್ತು ವೈಭವ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 19 ಸೆಪ್ಟೆಂಬರ್ 2021

ಭದ್ರಾವತಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಅದ್ಧೂರಿಯಾಗಿ ನೆರವೇರಿತು. ಸಾವಿರಾರು ಜನರ ಸಮ್ಮುಖದಲ್ಲಿ ಮೆರವಣಿಗೆ ನಡೆಸಿ ಗಣಪತಿ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು.

ಹೊಸಮನೆ ಬಡಾವಣೆಯಲ್ಲಿ ಹಿಂದೂ ಮಹಾಸಭಾ ಗಣಪತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಸಂಜೆ 5 ಗಂಟೆಗೆ ಅಲಂಕೃತಗೊಂಡ ವಾಹನದಲ್ಲಿ ಗಣೇಶ ಮೂರ್ತಿ ಮೆರವಣಿಗೆ ನಡೆಸಲಾಯಿತು. ರಂಗಪ್ಪ ಸರ್ಕಲ್’ನಿಂದ ಮಾಧವಾಚಾರ್ ಸರ್ಕಲ್ ವರೆಗೆ ಮೆರವಣಿಗೆ ನಡೆಸಲಾಯಿತು. ಬಳಿಕ ತರೀಕೆರೆ ರಸ್ತೆ ಬಳಿ ಭದ್ರಾ ನದಿಯಲ್ಲಿ ವಿಸರ್ಜಿಸಲಾಯಿತು.

ಮೆರವಣಿಗೆಯಲ್ಲಿ ಜನವೋ ಜನ

ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಮಹಿಳೆಯರು, ಮಕ್ಕಳು, ಯುವಕರು ಮೆರವಣಿಗೆಯಲ್ಲಿದ್ದರು. ಭಗವಾಧ್ವಜಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತ ಮೆರವಣಿಗೆಯಲ್ಲಿ ಭಾಗವಹಿಸಿದರು.

LifeSpring%2BKan%2B02

ಬಿಗಿ ಪೊಲೀಸ್ ಬಂದೋಬಸ್ತ್

ದೊಡ್ಡ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರಿಂದ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಡಿವೈಎಸ್’ಪಿ ಸಾಹಿಲ್ ಬಾಗ್ಲ  ಅವರು ಬಂದೋಬಸ್ತ್ ನೇತೃತ್ವ ವಹಿಸಿದ್ದರು.

ಹಿಂದೂ ಮಹಾಸಭಾ ಸಮಿತಿ ಅಧ್ಯಕ್ಷ ವಿ.ಕದಿರೇಶ್, ಮಂಗೋಟೆ ರುದ್ರೇಶ್, ಆನಂದಕುಮಾರ್, ಎಂ.ಪ್ರಭಾಕರ್, ಮಂಜುನಾಥ್ ಕದಿರೇಶ್, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಬಿ.ಕೆ.ಮೋಹನ್, ಗಣೇಶ್, ಚನ್ನಪ್ಪ, ರಾಮಮೂರ್ತಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಪಕ್ಷಗಳ ಪ್ರಮುಖರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

HMS%2B1

HMS%2B2

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 19, 2021

Leave a Comment