ಭದ್ರಾವತಿಯ ಗೋಣಿಬೀಡಿನ ಶಕ್ತಿಧಾಮದಲ್ಲಿ ಅಪ್ಪಾಜಿಗೌಡರ ಅಮೃತ ಶಿಲೆಯ ಪ್ರತಿಮೆ ಅನಾವರಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟೆಂಬರ್ 2021

ಮಾಜಿ ಶಾಸಕ ಅಪ್ಪಾಜಿಗೌಡ ಅವರ ಸಮಾಧಿ ಸ್ಥಳದಲ್ಲಿ, ಅವರ ಪುತ್ಥಳಿಯನ್ನು ಇವತ್ತು ಅನಾವರಣ ಮಾಡಲಾಯಿತು.

ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದಲ್ಲಿರುವ ಶಕ್ತಿಧಾಮದಲ್ಲಿ ಪ್ರತಿಮೆ ಸ್ಥಾಪಿಸಲಾಗಿದೆ. ಅದನ್ನು ಇವತ್ತು ಅನಾವರಣ ಮಾಡಿ, ಪ್ರಥಮ ವರ್ಷದ ಪುಣ್ಯ ಸ್ಮರಣೆ ಮಾಡಲಾಯಿತು.

ಹೇಗಿದೆ ಅಪ್ಪಾಜಿಗೌಡರ ಪ್ರತಿಮೆ?

ಅಮೃತ ಶಿಲೆಯಲ್ಲಿ ಅಪ್ಪಾಜಿಗೌಡ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಪ್ರತಿಮೆಯು ನಾಲ್ಕೂವರೆ ಅಡಿ ಉದ್ದ, ಮೂರೂವರೆ ಅಡಿ ಅಗಲವಿದೆ. ಅಪ್ಪಾಜಿಗೌಡ ಅವರು ಕುರ್ಚಿಯೊಂದರ ಮೇಲೆ ಕುಳಿತ ರೀತಿಯಲ್ಲಿ ಈ ಪುತ್ಥಳಿಯನ್ನು ಸ್ಥಾಪಿಸಲಾಗಿದೆ. ಪ್ರತಿಮೆಗೆ ನೆರಳು ನೀಡಲು ವಜ್ರಾಕೃತಿಯ ಮಂಟಪವನ್ನು ನಿರ್ಮಿಸಲಾಗಿದೆ.

NH nephrolody%2Bad %2Bkannada 10

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಪ್ಪಾಜಿಗೌಡ ಅವರ ಪ್ರತಿಮೆ ಅನಾವರಣ ಮಾಡಿದರು. ಆದಿಚುಂಚನಗಿರಿ ಶಾಖಾ ಮಠದ ಪ್ರಸನ್ನನಾಥ ಸ್ವಾಮೀಜಿ, ಬಸವಕೇಂದ್ರದ ಶ್ರೀ ಡಾ.ಬಸವ ಮರಳಸಿದ್ಧ ಸ್ವಾಮೀಜಿ, ಕನಕಪೀಠದ ಶ್ರೀ ಈಶ್ವರಾನಂದ ಸ್ವಾಮೀಜಿ, ಮಾಜಿ ಶಾಸಕ ವೈ.ಎಸ್.ವಿ.ದತ್ತ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ಜೆಡಿಎಸ್ ತಾಲೂಕು ಅಧ್ಯಕ್ಷ ಕರುಣಾಮೂರ್ತಿ, ಶಾರದಾ ಅಪ್ಪಾಜಿಗೌಡ, ಅಜಿತ್ ಗೌಡ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

appaji%2B7

appaji%2B6

appaji%2B5

appaji%2B4

appaji%2B3

appaji%2B2

appaji%2B1

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment