ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021
ರಿಯಲ್ ಎಸ್ಟೇಟ್ ಉದ್ಯಮಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಹಣಕಾಸು ವಿಚಾರವಾಗಿ ಹತ್ಯೆ ನಡೆದಿರುವ ಬಗ್ಗೆ ಪೊಲೀಸರಿಗೆ ಶಂಕೆ ವ್ಯಕ್ತವಾಗಿದೆ.
ಹೇಗಾಯ್ತು ಕೊಲೆ?
ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಲ್ಲೂರು ಇಂಡಸ್ಟ್ರೀಯಲ್ ಏರಿಯಾ ಶಾರದಾ ಕಾಲೋನಿ ಬಳಿ ಸಯ್ಯದ್ ಸಾಧಿಕ್ (38) ಹತ್ಯೆ ಮಾಡಲಾಗಿತ್ತು. ತಲೆ ಮೇಲೆ ಕಲ್ಲು ಎತ್ತಿ ಹಾಕಿದ ಬರ್ಬರವಾಗಿ ಕೊಲೆಗೈಯ್ಯಲಾಗಿತ್ತು. ತೀವ್ರ ರಕ್ತಸ್ರಾವವಾಗಿ ಸಯ್ಯದ್ ಸಾಧಿಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿ
ಸಯ್ಯದ್ ಸಾಧಿಕ್ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಅವರ ಕುಟುಂಬದವರು, ಸ್ನೇಹಿತರ ಪ್ರಕಾರ ಸಯ್ಯದ್ ಸಾಧಿಕ್ ನಡೆಸುತ್ತಿದ್ದ ಉದ್ಯಮ ಸುಸ್ಥಿರವಾಗಿತ್ತು. ಇಲಿಯಾಸ್ ನಗರದಲ್ಲಿ ಸಾಧಿಕ್ ವಾಸವಿದ್ದರು.
ಸಾವಿಗೆ ಕಾರಣವಾದ 15 ಲಕ್ಷ
ಸಯ್ಯದ್ ಸಾಧಿಕ್ ಕಳೆದ ವರ್ಷ ವ್ಯಕ್ತಿಯೊಬ್ಬರಿಗೆ 15 ಲಕ್ಷ ರೂ. ಹಣ ನೀಡಿದ್ದರು. ಇದುವೆ ಅವರ ಕೊಲೆಗೆ ಕಾರಣವಾಗಿರಬೇಕು ಎಂದು ಕುಟುಂಬದವರು ಶಂಕೆ ವ್ಯಕ್ತಪಡಿಸಿದ್ದಾರೆ. ಇದೆ ಆಯಾಮದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

15 ಲಕ್ಷ ರೂ. ಹಣವನ್ನು ಹಿಂತಿರುಗಿಸುವಂತೆ ಸಯ್ಯದ್ ಸಾಧಿಕ್ ಆ ವ್ಯಕ್ತಿಗೆ ಕೇಳಿದ್ದರು. ಇದೆ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿ ಹತ್ಯೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಸಯ್ಯದ್ ಸಾಧಿಕ್ ಸಹೋದರ ದೂರಿನಲ್ಲಿ ಇದೆ ವಿಚಾರವನ್ನು ತಿಳಿಸಿದ್ದಾರೆ.
ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






