ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಸೆಪ್ಟೆಂಬರ್ 2021
ಭಾರತ್ ಬಂದ್’ಗೆ ಬೆಂಬಲ ಘೋಷಿಸಿ ಕನ್ನಡಪರ ಸಂಘಟನೆಗಳು ಬೆಳ್ಳಂಬೆಳಗ್ಗೆ ರಸ್ತೆಗಿಳಿದಿವೆ. ಬಸ್ಸುಗಳ ಸಂಚಾರಕ್ಕೆ ತಡೆಯೊಡ್ಡಿ ಪ್ರತಿಭಟನೆ ನಡೆಸಿವೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ | ಭಾರತ್ ಬಂದ್ | ಶಿವಮೊಗ್ಗ ಸಿಟಿಯಲ್ಲಿ ನೀರಸ, ಬಸ್ಸು, ಆಟೋ, ವಾಹನ ಸಂಚಾರವಿದೆಯಾ?
ನಗರದ ಕೆಎಸ್ಆರ್’ಟಿಸಿ ಬಸ್ ನಿಲ್ದಾಣದ ಮುಂದೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಘೋಷಣೆ ಕೂಗುತ್ತ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಸ್ ಸಂಚಾರ ತಡೆಗೆ ಯತ್ನ
ಇನ್ನು, ಕೆಎಸ್ಆರ್’ಟಿಸಿ ಬಸ್ಸುಗಳ ಸಂಚಾರಕ್ಕೆ ತಡೆಯೊಡ್ಡಲು ಕನ್ನಡಪರ ಕಾರ್ಯಕರ್ತರು ಯತ್ನಿಸಿದರು. ಬಸ್ಸುಗಳು ಹೊರಗೆ ಹೋಗುವ ಮಾರ್ಗದಲ್ಲಿ ರಸ್ತೆಗೆ ಕುಳಿತು ಪ್ರತಿಭಟಿಸಿದರು. ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಕಾರ್ಯಕರ್ತರನ್ನು ಪಕ್ಕಕ್ಕೆ ಸರಿಸಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಉರುಳ ಸೇವೆ ಮಾಡಿದ ಕಾರ್ಯಕರ್ತರು
ಶಿವಮೊಗ್ಗದ ಅಶೋಕ ಸರ್ಕಲ್’ನಲ್ಲಿ ಕನ್ನಡಪರ ಸಂಘಟನೆ ಮುಖಂಡ ವಾಟಾಳ್ ಮಂಜುನಾಥ್ ಅವರು ಉರುಳು ಸೇವೆ ಮಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200